ADVERTISEMENT

ದ್ವಿಚಕ್ರ ವಾಹನಕ್ಕೆ ಗುದ್ದಿದ ಲಾರಿ; ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 22:29 IST
Last Updated 5 ಡಿಸೆಂಬರ್ 2021, 22:29 IST

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಗುಜರಿ ವ್ಯಾಪಾರಿ ಮಣಿವಣ್ಣನ್ (40) ಎಂಬುವರು ಮೃತಪಟ್ಟಿದ್ದಾರೆ.

‘ನಾಗನಾಥಪುರ ನಿವಾಸಿ ಮಣಿವಣ್ಣನ್, ಸಂಬಂಧಿ ಜೊತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹಿಂಬದಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಹೊಸ ರಸ್ತೆಯ ನಾಗನಾಥಪುರ ಜಂಕ್ಷನ್‌ನಲ್ಲಿ ಶನಿವಾರ ತಡರಾತ್ರಿ ದ್ವಿಚಕ್ರ ವಾಹನಕ್ಕೆ ಕಂಟೇನರ್ ಲಾರಿ ಗುದ್ದಿತ್ತು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಣಿವಣ್ಣನ್, ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.