ADVERTISEMENT

ಆಪರೇಷನ್ ಕಮಲ ನಡೆಸಿದ್ದೇ ಬಿಜೆಪಿ ಸಾಧನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 7:30 IST
Last Updated 5 ನವೆಂಬರ್ 2012, 7:30 IST

ಯಳಂದೂರು: `ಥಿಯೇಟರ್ ಇಲ್ಲದೆಯೇ ಆಪರೇಷನ್ ಕಮಲ ನಡೆಸಿದ್ದು ರಾಜ್ಯ ಬಿಜೆಪಿ ಸರ್ಕಾರ ಸಾಧನೆ ~ ಎಂದು ಶಾಸಕ ಹೆಚ್.ಎಸ್. ಮಹದೇವಪ್ರಸಾದ್ ವ್ಯಂಗ್ಯವಾಡಿದರು. 

 ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲ್ಲೂಕಿನ ಗುಂಬಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ `ಕಾಂಗ್ರೆಸ್‌ನೊಂದಿಗೆ ಬನ್ನಿ ಬದಲಾವಣೆ ತನ್ನಿ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ದರು. ಬಿಜೆಪಿಯು  ಆಪರೇಷನ್ ಕಮಲ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ 35 ಉಪ ಚುನಾವಣೆಗಳಿಗೆ ಕಾರಣವಾಗಿದೆ. ಇದಕ್ಕಾಗಿ ಸರ್ಕಾರದ ಬೊಕ್ಕಸದ ಹಣ ಪೋಲಾಗಿದೆ ಎಂದು ದೂರಿದರು.

  ಕಳೆದ ಮೂರು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 85 ಸಾವಿರ ಕೋಟಿ ಅನುದಾನ ಒದಗಿಸಿದೆ. ಒಂದು ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರ 25 ಸಾವಿರ ಕೋಟಿ ಸಾಲ ಮಾಡಿದೆ. ಬಿಜೆಪಿ ಸರ್ಕಾರದಿಂದ ಜನತೆ ಬೇಸತ್ತಿದ್ದಾರೆ.  ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಒಗ್ಗೂಡಿ ಕೆಲಸಮಾಡಬೇಕು ಎಂದರು.

 ಸಂಸದ ಆರ್ ಧ್ರುವನಾರಾಯಣ್ ಮಾತನಾಡಿ, ರಾಜ್ಯ ಸರ್ಕಾರವು ಕೇಂದ್ರದ ಯೋಜನೆಗಳ ಮೂಲಕವೇ ತನ್ನನ್ನು ಗುರುತಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಆದರೆ ಆರೋಗ್ಯ, ಶಿಕ್ಷಣ ಹಾಗೂ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಕಾರ್ಯ ಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಎಸ್. ಜಯಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀಪ್ರತಾಪ್, ಸದಸ್ಯರಾದ ಕೇತಮ್ಮ, ಪುಟ್ಟಬುದ್ಧಿ, ಸಿದ್ಧರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಚಂದ್ರು, ವಡಗೆರೆ ದಾಸ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ  ಉಪಾಧ್ಯಕ್ಷ ಎನ್. ಮಹಾದೇವಪ್ಪ, ಈಶ್ವರ್, ತಾ.ಪಂ. ಅಧ್ಯಕ್ಷೆ ಗಂಗಾಮಣಿರೇವಣ್ಣ, ಉಪಾಧ್ಯಕ್ಷ ರಾಮಚಂದ್ರ, ಸದಸ್ಯರಾದ ಉಮಾವತಿಸಿದ್ಧರಾಜು, ಗೌರಮ್ಮ
ಮಹದೇವಸ್ವಾಮಿ, ಪಟಟಣ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ಕಾಂಗ್ರೆಸ್‌ನ ನವೀನ್‌ಕೆರಹಳ್ಳಿ, ರತ್ನಮ್ಮ, ಕಿನಕಹಳ್ಳಿರಾಚಯ್ಯ, ಮಾಂಬಳ್ಳಿ ನಂಜುಂಡಸ್ವಾಮಿ, ಡಿ.ಎನ್. ನಟರಾಜು, ಗೌಡಹಳ್ಳಿ ಸೋಮಪ್ಪ, ರಾಜು, ದೊಡ್ಡಯ್ಯ, ಬಸವಣ್ಣ, ಪಾರ್ವತಮ್ಮ, ಪ್ರಭುಶಂಕರ್, ರಾಜಮ್ಮ, ಎಂ. ಶಂಕರ್, ಗಣೇಶ್, ಕೃಷ್ಣಾಪುರ ದೇವರಾಜು, ಚಂದ್ರು ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.