ಚಾಮರಾಜನಗರ: `ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯದ ಸದ್ಬಳಕೆಗೆ ಗ್ರಾಮೀಣರು ಮುಂದಾಗಬೇಕು~ ಎಂದು ವೈದ್ಯಾಧಿಕಾರಿ ಡಾ.ಕೆ.ಎಂ. ಮಹೇಂದ್ರ ಸಲಹೆ ನೀಡಿದರು.
ತಾಲ್ಲೂಕಿನ ಉಡಿಗಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ಸಮುದಾಯ ಆರೋಗ್ಯ ದಿನಾಚರಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜನರ ಆರೋಗ್ಯದ ದೃಷ್ಟಿಯಿಂದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಜಾರಿಗೊಂಡಿದೆ. ಜನನಿ ಸುರಕ್ಷಾ, ಪ್ರಸೂತಿ, ಮಡಿಲು ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೆರಿಗೆ ಸೇವೆ, ತಾಯಿ ಭಾಗ್ಯ ಯೋಜನೆ ಜಾರಿಗೊಂಡಿದ್ದು, ಅರ್ಹ ಫಲಾನುಭವಿಗಳು ಇದರ ಸೌಲಭ್ಯ ಪಡೆದು ಕೊಳ್ಳಬೇಕು ಎಂದರು.
ಪ್ರತಿ ಆರು ತಿಂಗಳಿಗೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮು ದಾಯ ಆರೋಗ್ಯ ದಿನಾಚರಣೆ ನಡೆಸಲಾಗುತ್ತಿದೆ. ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುವುದೇ ಇದರ ಉದ್ದೇಶ. ಆರೋಗ್ಯ ಇಲಾಖೆಯಿಂದ ದೊರೆ ಯುವ ಸೌಲಭ್ಯ ಕುರಿತು ಗ್ರಾಮೀಣರಿಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ನಿವೃತ್ತ ಡಿಎಚ್‌ಒ ಡಾ.ಕಮಲಮ್ಮ ಮಾತನಾಡಿ, `ಆರೋಗ್ಯ ಇಲಾಖೆ ಯಿಂದ ಈ ಹಿಂದೆ ಜನತೆಗೆ ಹೆಚ್ಚಿ ನ ಸೌಲಭ್ಯ ದೊರೆಯುತ್ತಿರಲಿಲ್ಲ. ಪ್ರಸ್ತುತ ಮನೆ ಬಾಗಿ ಲಿಗೆ ಆರೋಗ್ಯ ಸೇವೆ ತಲುಪಿಸಲಾಗುತ್ತಿದೆ~ ಎಂದರು.
30ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ಶಿವಕುಮಾರಸ್ವಾಮಿ, ಆರೋಗ್ಯ ಇಲಾಖೆಯ ಸಿ.ಆರ್. ಸುರೇಶ್, ಆರ್. ರಾಜೇಶ್, ಗ್ರಾ.ಪಂ. ಸದಸ್ಯರು, ಆರೋಗ್ಯ ಇಲಾಖೆಯ ನೌಕರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.