ADVERTISEMENT

ಇ-ಸ್ಟ್ಯಾಂಪಿಂಗ್ ಸೇವೆಗೆ ಸಚಿವ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 10:05 IST
Last Updated 14 ಸೆಪ್ಟೆಂಬರ್ 2011, 10:05 IST

ಚಾಮರಾಜನಗರ: `ಜಿಲ್ಲೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಇ-ಸ್ಟ್ಯಾಂಪಿಂಗ್‌ಗೆ ಚಾಲನೆ ನೀಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಸಮಾಜ ಕಲ್ಯಾಣ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ನಗರದ ಬಿ. ರಾಚಯ್ಯ ಜೋಡಿರಸ್ತೆಯ ಸೋಮಣ್ಣ ಲೇಔಟ್‌ನಲ್ಲಿರುವ ಶ್ರೀಕಂಠೇಶ್ವರ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೋಮವಾರ ಇ-ಸ್ಟ್ಯಾಂಪಿಂಗ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ರಮ ಛಾಪಾ ಕಾಗದಗಳಿಗೆ ಕಡಿವಾಣ ಹಾಕಲು ಇ-ಸ್ಟ್ಯಾಂಪಿಂಗ್‌ಗೆ ಚಾಲನೆ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆನ್‌ಲೈನ್ ಮೂಲಕ ಛಾಪಾ ಕಾಗದ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರದಲ್ಲೂ ಇ-ಸ್ಟ್ಯಾಂಪಿಂಗ್ ಶಾಖೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಘಟಕ ಸ್ಥಾಪಿಸಿರುವುದು ಒಳ್ಳೆಯದು. ಗ್ರಾಹಕರಿಗೆ ಸಕಾಲದಲ್ಲಿ ಇ-ಸ್ಟ್ಯಾಂಪಿಂಗ್ ಸೌಲಭ್ಯ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮುಖಂಡರಾದ ನಿರಂಜನ್‌ಕುಮಾರ್, ಎಚ್.ಎಸ್. ನಂಜಪ್ಪ, ಕೊಡಸೋಗೆ ಶಿವಬಸಪ್ಪ, ಕೆ.ಎಸ್. ನಾಗರಾಜಪ್ಪ, ಜಿ.ಪಂ. ಸದಸ್ಯೆ ಜಿ.ಎಸ್. ನಿತ್ಯಾ, ಎಪಿಎಂಸಿ ಅಧ್ಯಕ್ಷ ತೀರ್ಥೇಶ್, ನಿರ್ದೇಶಕ ವೀರತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎಚ್.ಟಿ. ಚಂದ್ರಶೇಖರ್, ಎ.ಸಿ. ಪ್ರವೀಣ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.