ADVERTISEMENT

‘ಚುನಾವಣೆ ಕರ್ತವ್ಯ ಲಘುವಾಗಿ ಪರಿಗಣಿಸಬೇಡಿ’

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 8:17 IST
Last Updated 29 ಮಾರ್ಚ್ 2018, 8:17 IST

ಚಾಮರಾಜನಗರ: ‘ಚುನಾವಣೆ ಕಾರ್ಯಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿಗಳು, ಸಿಬ್ಬಂದಿ ಚುನಾವಣಾ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು.

ನಗರದಲ್ಲಿ ಈಚೆಗೆ ಚುನಾವಣಾ ಕಾರ್ಯಕ್ಕೆ ನೇಮಕವಾಗಿರುವ ಮಾಸ್ಟರ್ ತರಬೇತಿದಾರರು ಹಾಗೂ ಸೆಕ್ಟರ್ ಅಧಿ ಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣೆ ಕೆಲಸಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಲಕಾಲಕ್ಕೆ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರಿಯಾಗಿ ಅರ್ಥೈಸಿ ಕೊಂಡು ಗೊಂದಲಗಳನ್ನು ಪರಿಹರಿಸಿ ಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಚುನಾವಣಾ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಅತ್ಯಂತ ಮುಖ್ಯ. ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸ ಬೇಕಿದ್ದರೆ ಪ್ರತಿ ಅಂಶವನ್ನು ಮನನ ಮಾಡಿಕೊಳ್ಳಬೇಕು. ತರಬೇತಿ ಅವಧಿಯಲ್ಲಿ ಎಲ್ಲವನ್ನೂ ತಿಳಿಸಲಾಗು ತ್ತದೆ. ಹಾಗಾಗಿ, ಇಂತಹ ತರಬೇತಿ ಕಾರ್ಯಕ್ರಮವನ್ನು ಸಮರ್ಪಕ ವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.

ಚುನಾವಣಾ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಪ್ರತಿಯೊಬ್ಬರೂ ಅವರಿಗೆ ನಿಗದಿ ಮಾಡಲಾದ ಕರ್ತವ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು. ಯಶಸ್ವಿಯಾಗಿ ಚುನಾವಣಾ ಕರ್ತವ್ಯವನ್ನು ಪೂರೈಸಬೇಕು ಎಂದು ತಿಳಿಸಿದರು.

ಚುನಾವಣಾ ಸಂಬಂಧ ತರಬೇತಿ ನೀಡಿದ ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಮಾತನಾಡಿ, ಚುನಾವಣೆ ಕೆಲಸಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಚುನಾವಣಾ ಸಂಬಂಧ ಸಮರ್ಪಕ ಮಾಹಿತಿ ಹೊಂದಿರಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಉತ್ತಮ ಸಮನ್ವಯದೊಂದಿಗೆ ನಿಯೋಜಿಸ ಲಾಗಿರುವ ಕೆಲಸವನ್ನು ಆಯಾ ಸಂದರ್ಭ ದಲ್ಲೇ ನಿರ್ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ಬಿ.ಫೌಜಿಯಾ ತರನ್ನಮ್‌, ತರಬೇತಿ ನೋಡಲ್ ಅಧಿಕಾರಿ ಹಾಗೂ ಕೃಷಿ ಉಪನಿರ್ದೇಶಕ ಯೋಗೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.