ADVERTISEMENT

‘ಜನರಿಗೆ ಪಕ್ಷದ ಸಿದ್ಧಾಂತ ತಿಳಿಸಿ’

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 6:59 IST
Last Updated 31 ಮಾರ್ಚ್ 2018, 6:59 IST

ಸಂತೇಮರಹಳ್ಳಿ: ಏಪ್ರಿಲ್ 3 ರಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೊಳ್ಳೇಗಾಲದಲ್ಲಿ ನಡೆಸಲಿರುವ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕು ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎನ್.ಮಹೇಶ್ ಮನವಿ ಮಾಡಿದರು. ಇಲ್ಲಿನ ಬಿಎಸ್‌ಪಿ ಕಚೇರಿಯಲ್ಲಿ ಗುರುವಾರ ನಡೆದ ಭೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜಿನ ಆವರಣದಲ್ಲಿ ವಿಕಾಸ ಪರ್ವ ಸಮಾವೇಶ ನಡೆಯಲಿದ್ದು, ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೈಕ್‌ ರ್‍ಯಾಲಿಯಲ್ಲಿ ಬರಬೇಕು ಎಂದು ಕೋರಿದರು.ಕಾರ್ಯಕರ್ತರು ಬೂತ್‌ಮಟ್ಟ ದಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಜನರಿಗೆ ಪಕ್ಷದ ತತ್ವ ಸಿದ್ಧಾಂತಗಳನ್ನು ತಿಳಿಸಬೇಕು. ಬಿಎಸ್‌ಪಿ ಸಿದ್ಧಾಂತಗಳನ್ನು ತಿಳಿದು ಈಗಾಗಲೇ ಹಲವು ಪಕ್ಷದ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾ ಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯ ಕರ್ತರು ಶ್ರಮವಹಿಸಬೇಕು ಎಂದರು.

ಬಿಎಸ್‌ಪಿ ಮುಖಂಡ ಕಮರವಾಡಿ ಶಂಕರಪ್ಪ ಮಾತನಾಡಿ, ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಬೂತ್ ಮಟ್ಟದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಕಾರ್ಯಕರ್ತರು ಮತದಾರರ ಪಟ್ಟಿಯನ್ನು ಪಡೆದುಕೊಂಡು ಈಗಿನಿಂದಲೇ ಮತದಾರರನ್ನು ಸೆಳೆಯುವ ಕೆಲಸ ಮಾಡ ಬೇಕು. ಚುನಾವಣೆ ಸಂದರ್ಭದಲ್ಲಿ ಗೊಂದಲಕ್ಕೆ ಒಳಗಾ ಗದೇ ಮತದಾರರ ಗುರುತಿನ ಚೀಟಿ ಸಮಯಕ್ಕೆ ತಲುಪಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಬಾಗಳಿ ರೇವಣ್ಣ, ಉಪಾಧ್ಯಕ್ಷ ಕಣ್ಣೇಗಾಲ ಮಹದೇವನಾಯ್ಕ, ಬ್ಲಾಕ್ ಅಧ್ಯಕ್ಷ ಬಸವಟ್ಟಿ ಮಲ್ಲೇಶಪ್ಪ, ಗ್ರಾ.ಪಂ. ಸದಸ್ಯ ಜಯಶಂಕರ್, ಗುರುರಾಜಾಚಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.