ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಪರಿಶೀಲನೆ

ಕಾಮಗಾರಿಗಳ ತ್ವರಿತ ಮುಕ್ತಾಯಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 9:21 IST
Last Updated 15 ಡಿಸೆಂಬರ್ 2012, 9:21 IST

ಕೊಳ್ಳೇಗಾಲ: ಜನವರಿ 7 ರಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸಲ್ದ್ದಿದು, ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಾಕೀತು ಮಾಡಿದರು.

ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಕುಟುಂಬ ಸಮೇತರಾಗಿ ಆಗಮಿಸಿದ ಉಸ್ತುವಾರಿ ಸಚಿವರು ಮಹದೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

ಮುಖ್ಯಮಂತ್ರಿಗಳು ಜ.7ರಂದು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆಗೊಳಿಸುವಂತೆ ಕುಡಿಯುವ ನೀರು ಸೇರಿದಂತೆ ಇತರೆ ಕಾಮಗಾರಿಗಳಿಗೆ ಚುರುಕು ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು, ಸಾಲೂರು ಮಠದ ಗುರುಸ್ವಾಮೀಜಿ, ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಜಯವಿಭವಸ್ವಾಮಿ,  ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ್, ಡಿವೈಎಸ್‌ಪಿ ಚನ್ನ ಬಸವಣ್ಣ, ನಿಂಗಶೆಟ್ಟಿ, ಉಜನಿ ಸಿದ್ದಪ್ಪ,  ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾ ರಿ ಎಚ್.ಎಂ. ಶಿವಲಿಂಗೇಗೌಡ ಇದ್ದರು.

ಮೆಚ್ಚುಗೆ
ಕೊಳ್ಳೇಗಾಲ : ತಾಲ್ಲೂಕಿನ ಶಿವನಸಮು ದ್ರ ಸಮೂಹ ದೇವಾಲಯಗಳಿಗೆ ಸಚಿವ ಸೋಮಣ್ಣ ಶುಕ್ರವಾರ ಬೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ರಂಗನಾಥಸ್ವಾಮಿ, ಆಧಿಶಕ್ತಿ ಮಾರಮ್ಮ ಮತ್ತು ಪ್ರಸನ್ನ ಮೀನಾಕ್ಷಿ ಸಮೇತ ಸೋಮೇಶ್ವರ ದೇವಾಲಯಗಳ ಅಭಿವೃದ್ಧಿ ಬಗ್ಗೆ ಉಪವಿಭಾಗಾ ಧಿಕಾರಿ ಎ.ಬಿ. ಬಸವರಾಜು ಅವರ ಕಾಳಜಿ ಮತ್ತು ಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜೀರ್ಣೋದ್ದಾರದ ಜೊತೆ ಅನ್ನ ದಾಸೋಹ ಸೇರಿದಂತೆ ಕುಡಿಯುವ ನೀರು, ಸ್ವಚ್ಛ ಪರಿಸರ ನಿರ್ಮಾಣ ಕ್ಕಾಗಿ ಅಭಿನಂದಿಸಿದರು. ಉಪವಿಭಾ ಗಾಧಿಕಾರಿ ಎ.ಬಿ. ಬಸವರಾಜು, ತಹಶೀಲ್ದಾರ್ ಸುರೇಶ್‌ಕುಮಾರ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಶ್ರೀಧರ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.