ADVERTISEMENT

ಪಡಿತರ ಚೀಟಿ ನೋಂದಣಿಗೆ ಹೆಚ್ಚು ಹಣ : ಕಂಪ್ಯೂಟರ್ ಕೇಂದ್ರಕ್ಕೆ ಬೀಗ

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 5:34 IST
Last Updated 21 ಜೂನ್ 2013, 5:34 IST

ಕೊಳ್ಳೇಗಾಲ: ಪಡಿತರ ಚೀಟಿ ನೋಂದಣಿಗೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಗ್ರಾಹಕರು ನೀಡಿದ ದೂರಿನ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಪಟ್ಟಣದ ಆರ್ಯ ಕಂಪ್ಯೂಟರ್ ಸೆಂಟರ್ ಮೇಲೆ ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಆರ್ಯ ಕಂಪ್ಯೂಟರ್ ಸೆಂಟರ್‌ನಲ್ಲಿ ಗ್ರಾಮೀಣ ಪ್ರದೇಶದ ಜನರಿಂದ ರೂ 100ರಿಂದ 300 ರೂಪಾಯಿವರೆಗೆ ಹಣ ಪಡೆಯಲಾಗುತ್ತಿದೆ ಎಂದು ಗ್ರಾಹಕರು ದೂರು ನೀಡಿದ್ದರು.

ದೂರಿನ ಮೇರೆಗೆ ಆಹಾರ ಶಿರಸ್ತೇದಾರ್ ನಿಂಗರಾಜು ಮತ್ತು ಆಹಾರ ನಿರೀಕ್ಷಕ ಭೀಮಪ್ಪ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಸ್ಥಳದಲ್ಲೇ ಇದ್ದ ಪಡಿತರ ಚೀಟಿದಾರರಿಂದ ಮಾಹಿತಿ ಪಡೆದರು. ಆರ್ಯ ಕಂಪ್ಯೂಟರ್ ಕೇಂದ್ರಕ್ಕೆ ಬೀಗ ಹಾಕಿಸಿ ಮುಂದಿನ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.