ADVERTISEMENT

ಪರಿಸರ ಸಮತೋಲನ ಕಾಪಾಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 8:21 IST
Last Updated 29 ಮಾರ್ಚ್ 2018, 8:21 IST

ಸಂತೇಮರಹಳ್ಳಿ: ವಾತಾವರಣದಲ್ಲಿ ತಾಪಮಾನ ಹೆಚ್ಚುತ್ತಿದ್ದು ಅದನ್ನು ನಿಯಂತ್ರಿಸಲು ಮರ ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಬೇಕು ಎಂದು ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿಯ ವ್ಯವಸ್ಥಾಪಕ ಅಭಿಷೇಕ್ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಿಡ, ಮರಗಳನ್ನು ಬೆಳೆಸುವು ದರಿಂದ ಪರಿಸರದಲ್ಲಿ ಸಮತೋಲನ ಕಾಪಾಡಬಹುದು. ವಿದ್ಯಾರ್ಥಿಗಳು ಮನೆಯ ಬಯಲಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಶಾಲೆಯಲ್ಲಿ ಬೆಳೆದಿರುವ ಗಿಡಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಕಂಪೆನಿ ವತಿಯಿಂದ ಕೊಳವೆ ಬಾವಿ ಕೊರೆಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಮುಖ್ಯಶಿಕ್ಷಕ ರಂಗಸ್ವಾಮಿ ಮಾತ ನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪೆನಿಗಳು ವಿವಿಧ ರೂಪದಲ್ಲಿ ಸಹಾಯ ಮಾಡುತ್ತಿರುವುದು ಸ್ವಾಗತಾರ್ಹ. ಎಲ್ಲ ವಿದ್ಯಾರ್ಥಿಗಳು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.

ಪರಿಸರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಲಾಗಿತ್ತು. ಎಲ್ಲ ಮಕ್ಕಳಿಗೂ ಉಚಿತವಾಗಿ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಮಹಿಂದ್ರಾ ಕಂಪೆನಿಯ ಸಹಾಯಕ ವ್ಯವಸ್ಥಾಪಕ ರಾಹುಲ್, ಚೌದರಿ, ಶಿಕ್ಷಕರಾದ ಸ್ಯಾಮುಯೆಲ್ ಉದಯ್‌ಕುಮಾರ್, ಎಸ್.ರತ್ನಮ್ಮ, ಸದಾಶಿವಯ್ಯ, ರತ್ನೀಮಾರ್ಗರೇಟ್, ಚಿನ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.