ಕೊಳ್ಳೇಗಾಲ: 2011-12ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಎಸ್‌ವಿಕೆ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಡಯಾನ ಭಾಗವಹಿಸಿ ಬಹುಮಾನ ಪಡೆದು ಶಾಲೆಗೆ ಮತ್ತು ಪಟ್ಟಣಕ್ಕೆ ಕೀರ್ತಿ ತಂದಿದ್ದಾಳೆ.
ಪ್ರಬಂಧ ಸ್ಪರ್ಧೆಯಲ್ಲಿ ಉತ್ತಮ ತರಬೇತಿ ಪಡೆದು ರಾಜ್ಯಮಟ್ಟದ ಸಾಧನೆ ಗೈಯ್ಯಬೇಕು ಎಂಬುದು ಡಯಾನಳ ಬಯಕೆ. ಶಾಲೆಯಲ್ಲಿ ನಡೆಯುವ ಎಲ್ಲ ಸ್ಪರ್ಧೆಗಳಲ್ಲೂ ಭಾಗವಹಿಸುವ ಹವ್ಯಾಸ ರೂಢಿಸಿ ಕೊಂಡಿರುವ ಈಕೆ, ಸ್ಥಳೀಯವಾಗಿ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಅನೇಕ ಸ್ಪರ್ಧೆಗಳಲ್ಲಿ ನಿರಂತರವಾಗಿ ಭಾಗವಹಿಸಿ ಅನೇಕ ಬಹುಮಾನ ಪಡೆದು ಸಾಧನೆ ಮಾಡಿದ್ದಾಳೆ. ಓದಿನಲ್ಲಿಯೂ ಆಸಕ್ತಿ ಹೊಂದಿರುವ ಈಕೆ ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಬೇಕೆನ್ನುವ ಗುರಿ ಹೊಂದಿದ್ದಾಳೆ.
`ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಈಕೆಗೆ ಹೆಚ್ಚಿನ ಆಸಕ್ತಿ. ಇನ್ನೂ ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎನ್ನುವ ಹಂಬಲ. ಪ್ರೌಢಶಾಲೆಯ ಉಪ ಪ್ರಾಂಶುಪಾಲ ಸಿದ್ದಮಾದಯ್ಯ ಮತ್ತು ಹಿರಿಯ ಶಿಕ್ಷಕರು ಮತ್ತು ದೈಹಿಕ ಶಿಕ್ಷಣದ ಶಿಕ್ಷಕ ಉಮೇಶ್ ಅವರ ಮಾರ್ಗದರ್ಶನ ಹಾಗೂ ತಂದೆ ಮತ್ತು ತಾಯಿ ಸ್ನೇಹಿತರ ಸಹಕಾರವೇ ನನ್ನೆಲ್ಲ ಸಾಧನೆಗೆ ಮುಖ್ಯ ಕಾರಣ~ ಎನ್ನುತ್ತಾಳೆ ಡಯಾನ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.