ADVERTISEMENT

ಬರ ನಿರ್ವಹಣೆಗೆ ರೂ. 7.5 ಕೋಟಿ ಬಿಡುಗಡೆ: ಸಚಿವ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2012, 8:10 IST
Last Updated 14 ಏಪ್ರಿಲ್ 2012, 8:10 IST

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯಲ್ಲಿ ಬರ ನಿರ್ವಹಣೆಗಾಗಿ 7.5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ಹೇಳಿದರು.

ತಾಲ್ಲೂಕಿನ ಅಗತಗೌಡನಹಳ್ಳಿ, ರಾಘವಾಪುರ, ಮಳವಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಬರ ನಿರ್ವಹಣೆ ವೀಕ್ಷಿಸಿ ಮಾತನಾಡಿದರು.

ಇಡೀ ಜಿಲ್ಲೆಗಾಗಿ 7.5 ಕೋಟಿ ರೂ. ಬಿಡುಗಡೆ ಮಾಡಿಸಲು ಕ್ರಮಕೈಗೊ ಳ್ಳಲಾಗುವುದು. ಇದರಲ್ಲಿ ಮೊದಲ ಕಂತಾಗಿ 4.5 ಕೋಟಿ ರೂಪಾಯಿ ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಉಳಿಕೆ 3 ಕೋಟಿ ರೂ. ಗಳನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಿಸಲಾಗುವುದು ಎಂದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿಯೂ ಬರದ ಪರಿಸ್ಥಿ ಉಂಟಾಗಿದೆ. ಇದನ್ನು ಈಗಾಗಲೇ ನಮ್ಮ ಸರ್ಕಾರದ ಸಚಿವರುಗಳು ಬಂದು ವೀಕ್ಷಿಸಿ ವರದಿ ತೆಗೆದು ಕೊಂಡು ಹೋಗಿದ್ದಾರೆ. ಜಿಲ್ಲೆಗೆ ಬರ ನಿರ್ವಹಣೆಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಸರಬರಾಜು ಹಾಗೂ ಇತರೆ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳವಳ್ಳಿ ಗ್ರಾಮದಲ್ಲಿ ಕೆರೆ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಕೆರೆ ಕಾಮಗಾರಿಯನ್ನು ಅತಿ ಶೀಘ್ರವಾಗಿ ನಡೆಸಬೇಕು. ಮಳೆಯಾಗಿ ನೀರು ತುಂಬಿ ಕೊಂಡರೆ ಗುತ್ತಿಗೆದಾರರು ಕೆಲಸ ಮಾಡುವುದಿಲ್ಲ. ಕೆಲಸ ಮಾಡದೆ ಬಿಲ್ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು. ರಾಘವಾಪುರ ಕೆರೆ ಕಾಮಗಾರಿಗೆ 40 ಲಕ್ಷ ರೂ. ವೆಚ್ಚ ಮಾಡಿದರೂ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ದೇವಯ್ಯ ಆರೋಪಿಸಿದರು.

ಶಾಸಕ ಎಚ್.ಎಸ್. ಮಹಾದೇವಪ್ರಸಾದ್, ಸಂಸದ ಆರ್. ಧ್ರುವನಾರಾಯಣ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಜಯಸಾರಥಿ, ಬಿಜೆಪಿ ಮುಖಂಡ ಎಚ್.ಎಸ್. ನಂಜಪ್ಪ, ಕೊಡಸೋಗೆ ಶಿವಬಸಪ್ಪ ಮುಂತಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.