ADVERTISEMENT

ಬಿಳಿಗಿರಿರಂಗನಬೆಟ್ಟ: ಗಾಂಜಾ ಗಿಡ ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2017, 5:43 IST
Last Updated 7 ಅಕ್ಟೋಬರ್ 2017, 5:43 IST
ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ಬಂಗ್ಲೇಪೋಡಿನ ಕಾಫಿತೋಟದ ಬಳಿ ಪತ್ತೆಯಾಗಿರುವ ಗಾಂಜಾ ಗಿಡಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು
ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ಬಂಗ್ಲೇಪೋಡಿನ ಕಾಫಿತೋಟದ ಬಳಿ ಪತ್ತೆಯಾಗಿರುವ ಗಾಂಜಾ ಗಿಡಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು   

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ಬಂಗ್ಲೆಪೋಡಿನ ಕಾಫಿತೋಟದ ಬಳಿಯಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಶುಕ್ರವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಂದಾಜು 20 ಕೆ.ಜಿ ತೂಕದ ಗಿಡಗಳನ್ನು ಪತ್ತೆ ಹಚ್ಚಲಾಗಿದೆ. ಕಾಫಿಗಿಡಗಳ ನಡುವೆ ಇದನ್ನು ಬೆಳೆಯಲಾಗಿತ್ತು. ಆರೋಪಿ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಸಿಪಿಐ ರಾಜೇಶ್ ನೇತೃತ್ವದ ತಂಡ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.