ADVERTISEMENT

`ಬೇಗೂರಿನಲ್ಲಿ ಹತ್ತಿ ಮಾರಾಟ ಕೇಂದ್ರ ಸ್ಥಾಪನೆ'

​ಪ್ರಜಾವಾಣಿ ವಾರ್ತೆ
Published 20 ಜೂನ್ 2013, 6:41 IST
Last Updated 20 ಜೂನ್ 2013, 6:41 IST

ಗುಂಡ್ಲುಪೇಟೆ: `ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಹತ್ತಿ ಮಾರಾಟ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಹೇಳಿದರು.

ರಾಷ್ಟ್ರೀಯ ಕೃಷಿವಿಕಾಸ ಯೋಜನೆಯಡಿ ಪಟ್ಟಣದ ಎ.ಪಿ.ಎಂ.ಸಿ ಪ್ರಾಂಗಣದಲ್ಲಿ 400 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮು ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತೆರಕಣಾಂಬಿ ಗ್ರಾಮದಲ್ಲಿ ಗೋದಾಮು ನಿರ್ಮಿಸಲು 20 ಲಕ್ಷ ರೂಪಾಯಿ ನೀಡಲಾಗಿದೆ. ರೈತರು ಕೃಷಿ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಸಿಗುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ಗೋದಾಮುಗಳಲ್ಲಿ ಅವುಗಳನ್ನು ಶೇಖರಿಸಿಸಲು ಅನುಕೂಲ ಕಲ್ಪಿಸುವುದಾಗಿ ಅವರು ತಿಳಿಸಿದರು.

ಕೊಬ್ಬರಿಗೆ ರಾಜ್ಯ ಸರ್ಕಾರ 6,500 ರೂಪಾಯಿ ಬೆಂಬಲ ಬೆಲೆ ಘೋಷಿಸಿದೆ. ಭೂ ಅಭಿವೃದ್ಧಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲಮನ್ನಾ ಮಾಡಲಾಗುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲೇ ಅರಿಸಿನ ಖರೀದಿಗೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಹಳೆಯ ಕಟ್ಟಡಗಳ ದುರಸ್ತಿಗೆ ಅನುದಾನ ನೀಡಲಾಗುತ್ತದೆ. ಯಶಸ್ವಿನಿ ಯೋಜನೆ ಪುನರಾರಂಭಿಸಿ ಎ.ಪಿ.ಎಲ್ ಮತ್ತು ಬಿ.ಪಿ.ಎಲ್ ಕಾರ್ಡುದಾರರಿಗೆ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ನಾಗಮ್ಮ. ಧರ್ಮದರ್ಶಿ ಮಂಡಳಿ ಮಾಜಿ ಅಧ್ಯಕ್ಷ ದೇಪಾಪುರ ಸಿದ್ದಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ನಾಗೇಶ್, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಪಿ.ಬಿ. ರಾಜಶೇಖರ್, ಮೈಸೂರು- ಚಾಮರಾಜನಗರ ಹಾಲು ಒಕ್ಕೂಟದ ಅಧ್ಯಕ್ಷ ಎನ್. ಮಹದೇವಪ್ಪ, ಹೊಂಗಳ್ಳಿ ನಾಗರಾಜು, ಗೋಪಾಲಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.