ADVERTISEMENT

ಬೋಳೆಗೌಡನಕಟ್ಟೆ: ಕಾಡಾನೆ ಹಿಂಡು ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 10:10 IST
Last Updated 23 ಮಾರ್ಚ್ 2011, 10:10 IST

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಓಂಕಾರ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಕಾಡಾನೆಗಳ ಹಿಂಡು ಕಾಣಿಸಿಕೊಂಡಿತು.ಇಲ್ಲಿನ ಎಚ್.ಡಿ. ಕೋಟೆ- ಬೇಗೂರು ರಸ್ತೆ ಯನ್ನು ದಾಟಿಕೊಂಡು ಕಾಡಾನೆಗಳು ರೈತರ ಜಮೀನುಗಳಿಗೆ ಬರುತ್ತಿದ್ದವು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಮತ್ತೆ ಅವುಗಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.

ಇತ್ತೀಚೆಗೆ ಕಾಡಾನೆಗಳು ಓಂಕಾರ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಅಲ್ಲದೆ ರೈತರ ಜಮೀನಿಗೆ ದಾಳಿ ನಡೆಸಿ ಬಾಳೆ, ಕಬ್ಬು ಮತ್ತಿತರ ಬೆಳೆ ನಾಶ ಮಾಡುತ್ತಿವೆ. ಇದರಿಂದ ಬೇಸತ್ತ ರೈತರು ಅನೇಕ ಬಾರಿ ಅರಣ್ಯ ಇಲಾಖೆಗೆ ದೂರು ಸಹ ನೀಡಿದ್ದಾರೆ. ಇನ್ನು ಮುಂದೆ ಆನೆಗಳ ಹಿಂಡು ದಾಳಿ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.