ADVERTISEMENT

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 5:49 IST
Last Updated 21 ಅಕ್ಟೋಬರ್ 2017, 5:49 IST
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಅಂಗವಾಗಿ ಶುಕ್ರವಾರ ಮಹಾ ರಥೋತ್ಸವ ನಡೆಯಿತು
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಅಂಗವಾಗಿ ಶುಕ್ರವಾರ ಮಹಾ ರಥೋತ್ಸವ ನಡೆಯಿತು   

ಮಲೆ ಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಕೊನೆಯ ದಿನವಾದ ಶುಕ್ರವಾರ ಮಲೆ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರದಿಂದ ಜರುಗಿತು.

ಸಾಲೂರು ಮಠದ ಮಠಾಧ್ಯಕ್ಷ ಗುರುಸ್ವಾಮಿ ನೇತೃತ್ವದಲ್ಲಿ ನಡೆದ ಮಹಾರಥೋತ್ಸವದಲ್ಲಿ ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರು ಪಾಲ್ಗೊಂಡಿದ್ದರು.

ರಥವನ್ನು ಎಳೆಯುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಬೇಡಗಂಪಣ ಸಮುದಾಯದ 101 ಮಹಿಳೆಯರು ಮಾಡಿದ ಬೆಲ್ಲದ ಆರತಿ ಆಕರ್ಷಕವಾಗಿತ್ತು.

ADVERTISEMENT

ಜಾತ್ರಾ ಮಹೋತ್ಸವ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೂರು ದಿನವೂ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.