ADVERTISEMENT

ಮಹಿಳಾ ಜನಪ್ರತಿನಿಧಿಗಳಿಗೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 7:07 IST
Last Updated 7 ಡಿಸೆಂಬರ್ 2017, 7:07 IST

ಚಾಮರಾಜನಗರ: ನಗರದ ತಾಲ್ಲೂಕಿನ ಓಡಿಪಿ ವಿಭಾಗೀಯ ಕೇಂದ್ರದಲ್ಲಿ ಇತ್ತೀಚೆಗೆ ದಿ ಹಂಗರ್‌ ಯೋಜನೆಯಡಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಜನಪ್ರತಿನಿಧಿಗಳಿಗೆ ಒಂದು ದಿನದ ಸೌಲಭ್ಯ ಆಧಾರಿತ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಪಂಚಾಯಿತಿಯ ನರೇಗಾ ಸಂಯೋಜಕ ಸುಂದರ್ ಮಾತನಾಡಿ, ಪಂಚಾಯಿತಿಗಳಲ್ಲಿ ಮಹಿಳಾ ಪ್ರತಿನಿಧಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಓಡಿಪಿ ಸಂಸ್ಥೆಯ ಯೋಜನೆಯು ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ತಾಲ್ಲೂಕಿನ ಕಾರ್ಯಕರ್ತೆ ಸುಶೀಲಾ ಮಾತನಾಡಿ, ಮಹಿಳಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಪ್ರಾಮಾಣಿಕವಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು. ಗ್ರಾಮ ಪಂಚಾಯಿತಿಯ ಸಾಮಾನ್ಯಸಭೆ, ವಾರ್ಡ್‌ ಸಭೆ, ಗ್ರಾಮ ಸಭೆಗಳಲ್ಲಿ ಭಾಗವಹಿಸುವ ಮೂಲಕ ಜನಪರ ಕೆಲಸ ಮಾಡಬೇಕು ಎಂದರು.

ADVERTISEMENT

ಸುಗ್ರಾಮ ತಾಲ್ಲೂಕು ಅಧ್ಯಕ್ಷೆ ಪದ್ಮಾ, ಖಜಾಂಚಿ ಜ್ಯೋತಿ, ನಿರ್ದೇಶಕಿ ಪುಟ್ಟನಂಜಮ್ಮ, ಸಮುದಾಯದ ಸುಶೀಲಾ, ಜಯಲಕ್ಷ್ಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.