ADVERTISEMENT

`ಮಹಿಳಾ ಮತದಾರರು ಜಾಗೃತರಾಗಿ'

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 7:06 IST
Last Updated 4 ಏಪ್ರಿಲ್ 2013, 7:06 IST

ಚಾಮರಾಜನಗರ: `ಮಹಿಳೆಯರು ಜಾಗೃತರಾಗಿ ಮತದಾನದ ಹಕ್ಕು ಚಲಾಯಿಸಿದರೆ ಜನತಂತ್ರ ವ್ಯವಸ್ಥೆಯ ಬೇರುಗಳು ಮತ್ತಷ್ಟು ಗಟ್ಟಿಗೊಳ್ಳು ತ್ತವೆ' ಎಂದು ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಹೇಳಿದರು.

ನಗರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಶೇ. 100ರಷ್ಟು ಮತದಾನ ಮಾಡ ಬೇಕಿದೆ. ಈ ನಿಟ್ಟಿನಲ್ಲಿ 18 ವರ್ಷ ತುಂಬಿದ ಎಲ್ಲರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿ ಗುರುತಿನ ಚೀಟಿ ನೀಡುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. 

ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಶಾಲಾ- ಕಾಲೇಜಿನ ವಿದ್ಯಾರ್ಥಿಗಳ ನೇತೃತ್ವದಡಿ ಮತದಾ ರರ ಜಾಗೃತಿ ಜಾಥಾ ನಡೆಸಲಾಗಿದೆ. ಆ ಮೂಲಕ ಅರಿವು ಮೂಡಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡಿರುವ ಮಹಿಳೆ ಯರು ತಪ್ಪದೆ ತಮ್ಮ ಅಕ್ಕಪಕ್ಕದ ಮನೆಯವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಲು ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ತಮ್ಮ ಮಕ್ಕಳಿಗೆ 18 ವರ್ಷ ತುಂಬಿದ್ದರೆ ಮತದಾರರ ಪಟ್ಟಿಗೆ ಸೇರಿಸಬೇಕು. ಭವಿಷ್ಯದ ಜನಪ್ರತಿ ನಿಧಿಗಳನ್ನು ಆಯ್ಕೆ ಮಾಡಲು ಅನುವು ಮಾಡಿಕೊಡಬೇಕು. ಆಗಮಾತ್ರ ಸುಭದ್ರವಾದ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಲಯನ್ಸ್ ಸಂಸ್ಥೆಯ ಎಲ್. ಸುರೇಶ್ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಜಿಲ್ಲಾ ಯೋಜನಾ ಧಿಕಾರಿ ಬಿ. ಗಣೇಶ್, ತಾಲ್ಲೂಕು ಯೋಜನಾಧಿಕಾರಿ ವಿಠಲ್ ಪೂಜಾರಿ, ಯೋಜನಾ ಮೇಲ್ವಿಚಾರಕ ಸಂಪತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.