ADVERTISEMENT

ಮಹಿಳೆಯರ ಆರ್ಥಿಕ ಸ್ವಾವಲಂಬನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 10:20 IST
Last Updated 14 ಸೆಪ್ಟೆಂಬರ್ 2011, 10:20 IST

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬನೆಗೆ ಅನುಕೂಲವಾಗಲು ಉಚಿತ ಹೊಲಿಗೆ ತರಬೇತಿ ನೀಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಿಜಯಸಾರಥಿ ಸೋಮವಾರ ಹೇಳಿದರು.

ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ವರ್ಲ್ಡ್ ವಿಷನ್ ಸಂಸ್ಥೆ ಹಾಗೂ ಗ್ರಾಮಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸೌಲಭ್ಯ ವಿತರಿಸಿದರು.

ಇಂದಿನ ಸನ್ನಿವೇಶದಲ್ಲಿ ಮಹಿಳೆ ಯರು ಸ್ವ ಉದ್ಯೋಗ ಕೈಗೊಳ್ಳುವುದರ ಮೂಲಕ ಸ್ವಾವಲಂಬಿಗಳಾಗಬೇಕು. ಇದಕ್ಕಾಗಿ ವಿವಿಧ ಸಂಘ ಸಂಸ್ಥೆಗಳು ನೀಡುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸ್ವ ಉದ್ಯೋಗದಿಂದ ಕುಟುಂಬ ನಿರ್ವಹಣೆ ಸರಳವಾಗುತ್ತದೆ. ಕುಟುಂಬದ ಸಣ್ಣ-ಪುಟ್ಟ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಇದು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಮಲ್ಲಿಕಾರ್ಜುನ್, ಗ್ರಾಮದ ಮುಖಂಡ ಹಾಗೂ ಹಿರಿಯ ಗಾಂಧಿವಾದಿ ಕಾಳವೀರಪ್ಪ ಮಾತನಾಡಿದರು.

ಗ್ರಾ.ಪಂ. ಸದಸ್ಯೆ ಜಯಮ್ಮ, ತರಬೇತುದಾರರಾದ ತಾಯಮ್ಮ, ಚಿಕ್ಕಮಾದಪ್ಪ, ಮಲ್ಲಪ್ಪ, ಪುಟ್ಟಸ್ವಾಮಿ, ಪುಟ್ಟಸಿದ್ದಯ್ಯ, ವರ್ಲ್ಡ್ ವಿಷನ್ ಸಂಸ್ಥೆಯ ವ್ಯವಸ್ಥಾಪಕ ಎಲಿಯೇಜರ್, ಪ್ರಭಾಕರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.