ಚಾಮರಾಜನಗರ: ಬಿಜೆಪಿ ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಜನಾಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಯುವ ಘಟಕದಿಂದ `ಯುವ ಧ್ವನಿ~ ಅಭಿಯಾನ ಆರಂಭಗೊಂಡಿದೆ.
`ರಾಜ್ಯ ಸರ್ಕಾರ ಮುಂದುವರಿಯಬೇಕೆ ಅಥವಾ ಬೇಡವೇ? ಎಂಬ ಪ್ರಶ್ನೆ ಮುಂದಿಟ್ಟುಕೊಂಡು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೆ. 5ರವರೆಗೆ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರದಲ್ಲೂ ಜನಾ ಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ.
ಸಾರ್ವಜನಿಕರು ಮಿಸ್‌ಕಾಲ್, ಎಸ್‌ಎಂಎಸ್, ಇ-ಮೇಲ್ ಮೂಲಕ ಹಾಗೂ ಯುವ ಘಟಕದಿಂದ ಸ್ಥಾಪಿಸುವ ಮತ ಗಟ್ಟೆಗಳಲ್ಲಿ ನೇರವಾಗಿ ಮತದಾನದ ಮೂಲಕವೂ ಅಭಿಪ್ರಾಯ ತಿಳಿಸ ಬಹುದು~ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆರೆಹಳ್ಳಿ ನವೀನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಭ್ರಷ್ಟಾಚಾರ ಉಲ್ಬಣಿಸಿದೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ. ಸ್ವಜನಪಕ್ಷಪಾತ ಎಲ್ಲೆ ಮೀರಿದೆ ಎಂದರು.
ಶೀಘ್ರವೇ, ಜಿಲ್ಲಾ ಕೇಂದ್ರದಲ್ಲಿರುವ ಪಕ್ಷದ ಕಚೇರಿ, ಭುವನೇಶ್ವರಿ ವೃತ್ತ, ಜಿಲ್ಲಾಡಳಿತ ಭವನ, ತಹಶೀಲ್ದಾರ್ ಕಚೇರಿ ಬಳಿಯಲ್ಲಿ ಮತಗಟ್ಟೆ ಸ್ಥಾಪಿಸಲಾ ಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯೆ ಜಿ. ನಾಗಶ್ರೀ, ಅರುಣ್‌ಕುಮಾರ್, ಶ್ರೀಕಾಂತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.