ADVERTISEMENT

ರೈತರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ: ಮಹೇಂದ್ರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2014, 10:27 IST
Last Updated 3 ಜನವರಿ 2014, 10:27 IST

ಚಾಮರಾಜನಗರ: ‘ದೇಶದಲ್ಲಿ ಒಂದು ದಶಕದ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ’ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಮಹೇಂದ್ರ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ರೈತ ಮೋರ್ಚಾದ ಕಾರ್ಯಕಾರಿಣಿ ಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿರುವ ರೈತರು ಜ್ವಲಂತ ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ಅವರಿಗೆ ಸೂಕ್ತ ಪರಿಹಾರ ನೀಡುವ ಶಕ್ತಿ ಇರುವುದು ನರೇಂದ್ರ ಮೋದಿ ಅವರಿಗೆ ಮಾತ್ರ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರೈತರನ್ನು ಬಲಿ ತೆಗೆದುಕೊಂಡಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಈಗ ರಾಜ್ಯ ರೈತ ಸಂಘ ಪರ್ಯಾಯ ದಿಕ್ಕಿನಲ್ಲಿದೆ. ಸಮರ್ಥ ನಾಯಕರಿಲ್ಲದೇ ರೈತ ಸಂಘದ ಅಧ್ಯಕ್ಷರಾರು? ಎಂಬುದು ತಿಳಿಯದಾಗಿದೆ. 1985ರ ಆಸುಪಾಸಿನಲ್ಲಿ ರೈತ ಸಂಘ ಬಲಿಷ್ಠವಾಗಿತ್ತು. ಆ ಸಂದರ್ಭದಲ್ಲಿ ಇದ್ದ ರೈತ ನಾಯಕರು ಈಗ ಇಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ರೈತ ಮೋರ್ಚಾವನ್ನು ಬಲಗೊಳಿಸಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಎಸ್‌. ನಾಗರಾಜಪ್ಪ ಬಿಜೆಪಿ ರೈತ ಮೋರ್ಚಾದ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗೇಂದ್ರ, ಲೋಹ ಸಂಗ್ರಹಣಾ ಸಮಿತಿಯ ಸಹ ಸಂಚಾಲಕ ನೂರೊಂದುಶೆಟ್ಟಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.