ADVERTISEMENT

ಶಾಲೆಗಾಗಿ ನಾವು-ನೀವು ಜಾಥಾಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 9:50 IST
Last Updated 7 ಜುಲೈ 2012, 9:50 IST

ಚಾಮರಾಜನಗರ: ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿ ನ ಆವರಣದಲ್ಲಿ ಗುರುವಾರ ಶಾಲೆ ಗಾಗಿ ನಾವು-ನೀವು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 6ರಿಂದ 14ವರ್ಷ ವಯಸ್ಸಿನ ಎಲ್ಲ ಮಕ್ಕಳಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀಡಬೇಕೆಂದು ಸರ್ಕಾರ ಜಾರಿಗೆ ತಂದಿರುವ ಮಕ್ಕಳ ಶಿಕ್ಷಣದ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಶಿಕ್ಷಕರು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆಯ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಹೆಚ್ಚಿದೆ ಎಂದು ಹೇಳಿದರು.

ಶಾಲೆಗಾಗಿ ನಾವು-ನೀವು ಉತ್ತಮ ಕಾರ್ಯಕ್ರಮವಾಗಿದೆ. ರಾಜ್ಯದ ಎಲ್ಲ ಶಾಲೆಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಕೋಟಿಗಟ್ಟಲೇ ಹಣ ನೀಡಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಗ್ರಾಮ ಪಂಚಾಯಿತಿ ಮತ್ತು ಜನ ಸಮುದಾಯದ ಸಹಕಾರ ಅಗತ್ಯ ಎಂದರು.

ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಬೆಂಬಲ ನೀಡಬೇಕಿದೆ. ಶಿಕ್ಷಕರು, ಸಂಘ-ಸಂಸ್ಥೆಗಳು, ಗ್ರಾಮ ಮತ್ತು ನಗರ ಪ್ರದೇಶದ ಪ್ರತಿಯೊಂದು ಬೀದಿಯಲ್ಲಿಯೂ ಮಕ್ಕಳ ಶಿಕ್ಷಣ ಹಕ್ಕು ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಆ ಮೂಲಕ ಹಕ್ಕಿನ ಮಹತ್ವವನ್ನು ಮನೆ ಮನೆಗೆ ತಲುಪಿಸಬೇಕು ಎಂದು ಆಶಿಸಿದರು.

ಜಾಥಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಅಂದಾನಿ, ಪ್ರಾಂಶುಪಾಲ ಮಹದೇವಯ್ಯ, ಉಪ ಪ್ರಾಂಶುಪಾಲ ನಂಜುಂಡಸ್ವಾಮಿ, ದೈಹಿಕ ಶಿಕ್ಷಣಾಧಿಕಾರಿ ಜವರಪ್ಪ, ಶಿಕ್ಷಕ ಗೋವಿಂದರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.