ADVERTISEMENT

ಶಿಥಿಲಗೊಂಡ ಓವರ್‌ಹೆಡ್‌ ಟ್ಯಾಂಕ್‌

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 7:06 IST
Last Updated 20 ಮಾರ್ಚ್ 2018, 7:06 IST
ಸಂತೇಮರಹಳ್ಳಿ ಸಮೀಪದ ಕಾವುದವಾಡಿ ಗ್ರಾಮದಲ್ಲಿ ಶಿಥಿಲಾವಸ್ಥೆ ತಲುಪಿರುವ ಓವರ್‌ಹೆಡ್ ಟ್ಯಾಂಕ್
ಸಂತೇಮರಹಳ್ಳಿ ಸಮೀಪದ ಕಾವುದವಾಡಿ ಗ್ರಾಮದಲ್ಲಿ ಶಿಥಿಲಾವಸ್ಥೆ ತಲುಪಿರುವ ಓವರ್‌ಹೆಡ್ ಟ್ಯಾಂಕ್   

ಸಂತೇಮರಹಳ್ಳಿ: ಸಮೀಪದ ಕಾವುದವಾಡಿ ಗ್ರಾಮದಲ್ಲಿರುವ ಓವರ್‌ಹೆಡ್ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು, ಯಾವ ಸಮಯದಲ್ಲಾದರೂ ಕುಸಿಯುವ ಸಾಧ್ಯತೆ ಇದೆ.

ಟ್ಯಾಂಕ್‌ನ ಗಾರೆ ಉದುರುತ್ತಿದೆ. ಇದರಿಂದಾಗಿ ದಾರಿ ಹೋಕರು ಭಯದಿಂದ ತಿರುಗಾಡುವಂತಾಗಿದೆ. ಅಕ್ಕ ಪಕ್ಕದ ನಿವಾಸಿಗಳು ಆತಂಕದಲ್ಲಿ ದಿನದೂಡುತ್ತಿದ್ದಾರೆ.

‘ಟ್ಯಾಂಕ್ ತೆರವುಗೊಳಿಸಿ ಎಂದು ನಿವಾಸಿಗಳು ಸಂಬಂಧಪಟ್ಟವರಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನ ವಾಗಿಲ್ಲ. ಮುಂದಾಗಬಹುದಾದ ಅಪಾಯವನ್ನು ತಪ್ಪಿಸಲು ಓವರ್‌ಹೆಡ್ ಟ್ಯಾಂಕ್‌ನ್ನು ತೆರವುಗೊಳಿಸಬೇಕು’ ಎಂದು ಸ್ಥಳೀಯರಾದ ಮಹದೇವಸ್ವಾಮಿ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.