ADVERTISEMENT

ಸಂಜೀವ್ ಭಟ್ ಬಂಧನ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 6:20 IST
Last Updated 11 ಅಕ್ಟೋಬರ್ 2011, 6:20 IST

ಚಾಮರಾಜನಗರ: ಗೋಧ್ರಾ ನಂತರದ ಗಲಭೆ ಸಂಬಂಧ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸಿರುವ ಗುಜರಾತ್ ಸರ್ಕಾರದ ಕ್ರಮ ಖಂಡಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಭಟ್ ಅವರ ಮೇಲೆ ಹೂಡಿರುವ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಹಿರಿಯ ಪೊಲೀಸ್ ಅಧಿಕಾರಿಯಾದ ಸಂಜೀವ್ ಭಟ್ ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಬಗ್ಗೆ ಸಹಿಸದ ಮೋದಿ ಅವರು ಕಾನೂನು ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ. ಭಟ್ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಈ ವಿಷಯ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿಯೇ ಭಟ್ ಅವರನ್ನು ಉದ್ದೇಶಪೂರ್ವವಾಗಿ ಬಂಧಿಸಲಾಗಿದೆ ಎಂದು ದೂರಿದರು.

ಮುಖಂಡರಾದ ಮುಜಾಮಿಲ್ ಅಹಮ್ಮದ್, ಜಬೀಉಲ್ಲಾ, ಸೈಯದ್ ಜುಲ್ಫೀ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ರಾರ್ ಅಹಮ್ಮದ್, ಡಿಎಸ್‌ಎಸ್‌ನ ಸಂಘೀನ, ಆಲೂರು ನಾಗೇಂದ್ರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.