ADVERTISEMENT

`ಸಾಮಾಜಿಕ ಕಾಳಜಿ ತೋರಿಸಿ'

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 6:38 IST
Last Updated 22 ಜುಲೈ 2013, 6:38 IST

ಗುಂಡ್ಲುಪೇಟೆ: ರಾಜಕೀಯ ಸುದ್ದಿಗಳಿಗಿಂತ ಸಾಮಾಜಿಕ ಅಭಿವೃದ್ಧಿಯ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯತೆ ಇದೆ ಎಂದು ಪತ್ರಿಕೋದ್ಯಮಿ ರಾಜಶೇಖರ ಕೋಟಿ ಹೇಳಿದರು.

ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ ಮಹಾಮನೆಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ `ಪತ್ರಿಕಾ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಭಿನ್ನ ದೃಷ್ಟಿಕೋನಗಳಿಂದ ಸುದ್ದಿಯನ್ನು ವಿಮರ್ಶಿಸಿ ಅದರಿಂದಾಗುವ ಸಾಮಾಜಿಕ ಕಾಳಜಿಯನ್ನು ಎತ್ತಿ ತೋರಿಸುವ ಕೆಲಸ ಪರ್ತಕರ್ತರಿಂದ ಆಗಬೇಕಿದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ರಹಂ ಡಿ ಸಿಲ್ವಾ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಸಿ. ನಾಗೇಂದ್ರ, ಕೆಜೆಪಿ ಮುಖಂಡ ಸಿ.ಎಸ್. ನಿರಂಜನಕುಮಾರ್, ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ಬಿ.ಪಿ. ಮುದ್ದುಮಲ್ಲು, ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ನಂಜಪ್ಪ, ವಿಮೋಚನ ಟ್ರಸ್ಟ್ ಅಧ್ಯಕ್ಷ ಸಿದ್ದರಾಜು ಹಾಗೂ ಇತರರು ಹಾಜರಿದ್ದರು.

ವಿಮೋಚನ ಚಾರಿಟಬಲ್ ಟ್ರಸ್ಟ್ ಮತ್ತು ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ಮೈಮುಲ್ ಅಧ್ಯಕ್ಷ ಎನ್. ಮಹದೇವಪ್ಪ ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.