ADVERTISEMENT

ಸಿರಿಯಾ ಹತ್ಯಾಕಾಂಡ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 5:57 IST
Last Updated 10 ಮಾರ್ಚ್ 2018, 5:57 IST
ಚಾಮರಾಜನಗರದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಚಾಮರಾಜನಗರದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಸಿರಿಯಾದಲ್ಲಿ ನಡೆಯುತ್ತಿರುವ ಮಾನವ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಟಿಪ್ಪು ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಅಲ್ಲಿಂದ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನದಲ್ಲಿ ಘೋಷಣೆ ಕೂಗಿದರು. ಬಳಿಕ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಮೂಲಕ ರಾಷ್ಟ್ರಪತಿ ಹಾಗೂ ವಿಶ್ವಸಂಸ್ಥೆಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಮಾತ ನಾಡಿ, ಸಿರಿಯಾದಲ್ಲಿ ನಡೆಯುತ್ತಿ ರುವ ಅಮಾನುಷ ಕೃತ್ಯಗಳು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಘಟನೆ ಯನ್ನು ಎಸ್‌ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ವಿಶ್ವಸಂಸ್ಥೆಯು ಈ ಘಟನೆಯನ್ನು ಮೌನವಾಗಿ ನೋಡುತ್ತಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಸಿರಿಯಾದಲ್ಲಿ ಶಾಂತಿ ಕಾಪಾಡಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಅಲ್ಲಿನ ಜನತೆಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಪಕ್ಷದ ಉಪಾಧ್ಯಕ್ಷ ಸಮೀವುಲ್ಲಾಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಬೀನೂರ್, ನಗರಸಭಾ ಸದಸ್ಯರಾದ ಸಿ.ಎಸ್. ಸೈಯದ್‍ಆರೀಫ್, ಸೈಯದ್‍ಇಮ್ರಾನ್, ಎಂ.ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.