ಗುಂಡ್ಲುಪೇಟೆ: ತಾಲ್ಲೂಕಿನ ಪ್ರಖ್ಯಾತ ಪ್ರವಾಸಿ ತಾಣ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಆಕಸ್ಮಿಕವಾಗಿ ವ್ಯಾಪಿಸಿದ ಬೆಂಕಿಗೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಬಳಿಯಿಂದ ಪೂರ್ವಕ್ಕೆ 4 ಕಿಲೋಮೀಟರ್ ದೂರದಲ್ಲಿರುವ ಖಾರೇಮಾಳದ ಬಳಿಯಿಂದ ಪ್ರಾರಂಭವಾದ ಬೆಂಕಿಯು ಜಕ್ಕಳ್ಳಿ, ಮಂಗಲ ಸೇರಿದಂತೆ ಮದ್ದೂರು ಅರಣ್ಯ ವಲಯದವರೆವಿಗೂ ವ್ಯಾಪಿಸಿದೆ.
ಪಶ್ಚಿಮವಾಗಿ ಕಿರುಬನ ಕೊಳಚೆ ಪ್ರದೇಶದ ಮೂಲಕ 500 ರಿಂದ 600 ಎಕರೆ ವ್ಯಾಪಿಸಿದ ಕಿಚ್ಚು ಅರಣ್ಯ ಮತ್ತು ವನ್ಯ ಪ್ರಾಣಿಗಳ ಆಹುತಿ ತೆಗೆದುಕೊಂಡಿದೆ.
ಅರಣ್ಯ ಇಲಾಖೆಯ 300 ರಷ್ಟು ಸಿಬ್ಬಂದಿ ಬೆಂಕಿ ನಂದಿಸಲು ಅವ್ಯಾಹತವಾಗಿ ಶ್ರಮಿಸುತ್ತಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿ ಯೋಜನೆ ನಿರ್ದೇಶಕ ಕಾಂತರಾಜು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗುಂಡ್ಲುಪೇಟೆ ಸಬ್ ಇನ್‌ಸ್ಪೆಕ್ಟರ್ ಎಂ.ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಜನರನ್ನು ನಿಯಂತ್ರಿಸಲು ಶ್ರಮಿಸಿದರು. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.