ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮದ ಚೆನ್ನಿಪುರ ದೊಡ್ಡಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಡಲಾಯಿತು.
ಗ್ರಾಮದ ಸೇಂದಿಲ್ ಎಂಬುವರ ತೋಟದಲ್ಲಿ ಬುಧವಾರ ಬೆಳಿಗ್ಗೆ 13 ಅಡಿಗಿಂತ ಹೆಚ್ಚಿನ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು, ಮಾಲೀಕರು ಕೂಡಲೇ ಉರಗ ಪ್ರೇಮಿ ಸ್ನೇಕ್ ಬಾಬು ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸ್ನೇಕ್ ಬಾಬು ಹೆಬ್ಬಾವನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಗುಂಡಲ್ ಅರಣ್ಯ ಪ್ರದೇಶಕ್ಕೆ ಬಿಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.