ADVERTISEMENT

ಚಾಮರಾಜನಗರ: 144 ಸಕ್ರಿಯ ಕೊರೊನಾವೈರಸ್ ಸೋಂಕು ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 15:11 IST
Last Updated 8 ನವೆಂಬರ್ 2020, 15:11 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 10 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. 19 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಸದ್ಯ 144 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 101 ಮಂದಿ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಇರುವವರು 43 ಮಂದಿ ಮಾತ್ರ. ಇವರಲ್ಲಿ ಐಸಿಯುನಲ್ಲಿ 17 ಮಂದಿ ಐಸಿಯುನಲ್ಲಿದ್ದಾರೆ.

ಭಾನುವಾರದ ಅಂಕಿ ಅಂಶಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 6,109 ಪ್ರಕರಣಗಳು ದೃಢಪಟ್ಟಿವೆ. 5,838 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 107 ಮಂದಿ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಭಾನುವಾರ 924 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 914 ಮಂದಿಯ ವರದಿ ನೆಗೆಟಿವ್‌ ಬಂದಿದೆ. 10 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.