ADVERTISEMENT

ಚಾಮರಾಜನಗರ: 20 ಹೊಸ ಪ್ರಕರಣ, 26 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 15:45 IST
Last Updated 9 ನವೆಂಬರ್ 2020, 15:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,128ಕ್ಕೆ ಏರಿದೆ. 5,864 ಮಂದಿ ಗುಣಮುಖರಾಗಿದ್ದಾರೆ. 138 ಸಕ್ರಿಯ ಪ್ರಕರಣಗಳಿವೆ. 20 ಮಂದಿ ಐಸಿಯುನಲ್ಲಿದ್ದಾರೆ. 90 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 107 ಮಂದಿ ಕೋವಿಡ್‌ ಕಾರಣದಿಂದ ಹಾಗೂ 19 ಮಂದಿ ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟಿದ್ದಾರೆ.

546 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಸೋಮವಾರ ಬಂದಿದ್ದು, 526 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.