ಮಹದೇಶ್ವರ ಬೆಟ್ಟ: ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ₹2.29 ಕೋಟಿ ಹಣ ಸಂಗ್ರಹವಾಗಿದೆ.
ಗುರುವಾರ ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಹಣ ಹಾಗೂ ವರ್ಗಾವಣೆ ಕಾರ್ಯ ಜರುಗಿತು.
ಕಳೆದ 30 ದಿನಗಳಲ್ಲಿ ಒಟ್ಟು ಸಂಗ್ರಹವಾದ ಮೊತ್ತ ₹2,29,67,216.00 (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 18 ಗ್ರಾಂ, ಬೆಳ್ಳಿ 01 ಕೆ.ಜಿ 200 ಗ್ರಾಂ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಾಧೀಕ್ಷಕರಾದ ಗುರುಮಲ್ಲಯ್ಯ ಹಾಗು ಜಿಲ್ಲಾಡಳಿತ ಕಛೇರಿಯ ಶಶಿಕುಮಾರ್, ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡಾ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.