ADVERTISEMENT

ಚಾಮರಾಜನಗರ: ಒಂದೇ ದಿನ 23,788 ಮಂದಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 17:57 IST
Last Updated 22 ಜೂನ್ 2021, 17:57 IST
ವಿಶೇಷ ಕೋವಿಡ್‌ ಲಸಿಕಾ ಮೇಳದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯ ಕುಟುಂಬದ ಸದಸ್ಯರಿಗೆ ಲಸಿಕೆ ಹಾಕಲಾಯಿತು
ವಿಶೇಷ ಕೋವಿಡ್‌ ಲಸಿಕಾ ಮೇಳದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯ ಕುಟುಂಬದ ಸದಸ್ಯರಿಗೆ ಲಸಿಕೆ ಹಾಕಲಾಯಿತು   

ಚಾಮರಾಜನಗರ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕೋವಿಡ್‌ ಲಸಿಕಾ ಮೇಳದಲ್ಲಿ ಒಟ್ಟು 23,778 ಮಂದಿಗೆ ಲಸಿಕೆ ಹಾಕಲಾಗಿದೆ.

ಜಿಲ್ಲಾಡಳಿವು 20 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿತ್ತು. ಗುರಿಯನ್ನೂ ಮೀರಿ ಲಸಿಕಾ ಮೇಳ ಯಶಸ್ವಿಯಾಗಿದೆ.

ಲಸಿಕೆ ಪಡೆದ 23,778 ಜನರಲ್ಲಿ 21,296 ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. 2,482 ಮಂದಿ ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದಾರೆ.

ADVERTISEMENT

ಚಾಮರಾಜನಗರ ತಾಲ್ಲೂಕಿನಲ್ಲಿ 8,527, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 6,357, ಕೊಳ್ಳೇಗಾಲದಲ್ಲಿ 3,449, ಹನೂರು ತಾಲ್ಲೂಕಿನಲ್ಲಿ 3,644 ಮಂದಿ ಹಾಗೂ ಯಳಂದೂರು ತಾಲ್ಲೂಕಿನಲ್ಲಿ 1,801 ಮಂದಿಗೆ ಲಸಿಕೆ ಹಾಕಲಾಗಿದೆ.

ಸೋಮವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಲಸಿಕೆ ಹಾಕಿಸಿಕೊಂಡಿರುವವರ ಸಂಖ್ಯೆ 1,72,119ಕ್ಕೆ ಏರಿದೆ. 2,27,523 ಮಂದಿ ಮೊದಲ ಡೋಸ್‌ ಪಡೆದುಕೊಂಡಿದ್ದರೆ, 44,596 ಮಂದಿ 2ನೇ ಡೋಸ್‌ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.