ADVERTISEMENT

290 ಕೆ.ಜಿ ಗಾಂಜಾ ಗಿಡ ವಶ: ಬಂಧನ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 22:15 IST
Last Updated 8 ನವೆಂಬರ್ 2020, 22:15 IST
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ನಾಗರಕಟ್ಟೆದೊಡ್ಡಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ನಾಗರಕಟ್ಟೆದೊಡ್ಡಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   

ಹನೂರು (ಚಾಮರಾಜನಗರ): ತಾಲ್ಲೂಕಿನ ನಾಗರಕಟ್ಟೆ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆಯಲಾಗಿದ್ದ 290 ಕೆ.ಜಿ ಹಸಿ ಗಾಂಜಾ ಗಿಡಗಳನ್ನು ಹನೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ವಡಿವೇಲು ಎಂಬಾತನನ್ನು ಶನಿವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಲಾಗಿದೆ.

ಜಮೀನಿನಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಇನ್‌ಸ್ಪೆಕ್ಟರ್ ರವಿನಾಯಕ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಒಟ್ಟು 129 ಗಾಂಜಾ ಗಿಡಗಳನ್ನು ಬೆಳೆಸಿದ್ದು, ಅದರ ಒಟ್ಟು ತೂಕ 290 ಕೆ.ಜಿ ಎಂದು‌ ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಪಿಎಸ್ಐ ನಾಗೇಶ್, ಹೆಡ್ ಕಾನ್‌ಸ್ಟೆಬಲ್ ರಾಮದಾಸ್, ಕಾನ್‌ಸ್ಟೆಬಲ್‌ಗಳಾದ ಬಿಳಿಗೌಡ, ರಾಮಶೆಟ್ಟಿ, ರಾಘವೇಂದ್ರ, ಚಂದ್ರ, ರಾಜು ಹಾಗೂ ಶಿವು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.