ADVERTISEMENT

ಬಯಲು ಶೌಚಮುಕ್ತ ಗ್ರಾಮಕ್ಕೆ ಪಣ

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 8:42 IST
Last Updated 6 ಜನವರಿ 2018, 8:42 IST

ಚಾಮರಾಜನಗರ: ‘ಕೊತ್ತಲವಾಡಿ ಗ್ರಾಮವನ್ನು ಬಯಲು ಶೌಚಮುಕ್ತ ಗ್ರಾಮವನ್ನಾಗಿ ಮಾಡಲು ಪಣತೊಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗಮ್ಮ ಹೇಳಿದರು.

ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಣಿ ಮತ್ತು ಭೂ ಇಲಾಖೆಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಡೆದ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯ ಪಡೆದುಕೊಂಡು ಎಲ್ಲರು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಬಯಲು ಶೌಚಮುಕ್ತ ಗ್ರಾಮವನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ADVERTISEMENT

ಗಣಿ ಉದ್ಯಮಿ ಎ. ಶ್ರೀನಾಥ್ ಮಾತನಾಡಿ, ಕೊತ್ತಲವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 4 ಶೌಚಾಲಯ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧಿಕಾರಿ ಬಿ.ಎಸ್. ಶೋಭಾ, ಎಸ್‌ಡಿಎ ಮಹದೇವಸ್ವಾಮಿ, ಬಿಲ್‌ಕಲೆಕ್ಟರ್ ಎಂ. ಮಹದೇವಸ್ವಾಮಿ, ಭೂ ವಿಜ್ಞಾನಿಗಳಾದ ಸುಬ್ರಹ್ಮಣ್ಯಂ, ರೋಹಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.