ADVERTISEMENT

ಸಂಸ್ಕೃತಿ ಬೆಳೆಸುವುದು ಎಲ್ಲರ ಕರ್ತವ್ಯ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 8:56 IST
Last Updated 8 ಜನವರಿ 2018, 8:56 IST

ಚಾಮರಾಜನಗರ: ‘ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪೋಷಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಕರ್ತವ್ಯವಾಗಿದೆ’ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಪತಿ ಹೇಳಿದರು.

ನಗರದ ಸೇವಾ ಭಾರತಿ ಸಂಯುಕ್ತ ಪದವಿ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ದಾನಿ ವೆಂಕಟಸುಬ್ಬಮ್ಮ ಅವರ ಜನ್ಮಶತಾಬ್ದಿ ನಿಮಿತ್ತ ನಡೆದ ಸೇವಾ ಕ್ರೀಡೋತ್ಸವ-ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೋತ್ಸವ ಆಯೋಜಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಲು ಹಾಗೂ ಅಭಿಪ್ರಾಯ ವಿನಿಯಮ ಮಾಡಿಕೊಳ್ಳಲು ಉತ್ತಮ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಕ್ರೀಡಾಕೂಟದಿಂದ ಸ್ನೇಹಮಯ ವಾತಾವರಣ ವೃದ್ಧಿಯಾಗುತ್ತದೆ. ಕ್ರೀಡೆ ಬೆಳೆವಣಿಗೆಯಾದಷ್ಟೂ ದೇಶ ಅಭಿವೃದ್ಧಿಯಾಗುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾಕೂಟದಲ್ಲಿ ಭಾಗವಹಿಸುವುದಕ್ಕೆ ಹೆಚ್ಚಿನ ಪ್ರಾಮುಖ್ಯವನ್ನು ನೀಡಬೇಕು ಎಂದರು.

ಸಬ್ ಇನ್‌ಸ್‍ಪೆಕ್ಟರ್ ರಾಜೇಂದ್ರ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು. ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಗೆಲುವು ನಿಮ್ಮದಾಗುತ್ತದೆ ಎಂದು ತಿಳಿಸಿದರು. ಜಿಲ್ಲೆಯ ಎಲ್ಲ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವ್‌ರಾವ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸದಸ್ಯರಾದ ಎಸ್. ಬಾಲಸುಬ್ರಮಣ್ಯ, ರಾ.ಸತೀಶ್, ಪ್ರಾಂಶುಪಾಲರಾದ ಡಾ.ನಿರ್ಮಲಾ, ಲೋಕೇಶ್, ಉಪನ್ಯಾಸಕ ಪ್ರದೀಪ್‌ಕುಮಾರ್ ದೀಕ್ಷಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.