ADVERTISEMENT

ಚಾಮರಾಜನಗರ | 64 ಮಂದಿಗೆ ಸೋಂಕು, 27 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 13:52 IST
Last Updated 15 ಆಗಸ್ಟ್ 2020, 13:52 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 64 ಮಂದಿಗೆ ಕೊರೊನಾ ವೈರಸ್‌ ತಗುಲಿದೆ. 27 ಮಂದಿ ಗುಣಮುಖರಾಗಿದ್ದಾರೆ. ವಾರದ ನಂತರ ಇದೇ ಮೊದಲ ಬಾರಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ಜಿಲ್ಲೆಯಲ್ಲಿ ವರದಿಯಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 1,551ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 1,074ಕ್ಕೆ ಹಿಗ್ಗಿದೆ. 447 ಸಕ್ರಿಯ ಪ್ರಕರಣಗಳಿವೆ. 134 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದರೆ, ಉಳಿದವರು ಕೋವಿಡ್‌ ಆಸ್ಪತ್ರೆ/ಕೇರ್‌ ಕೇಂದ್ರಗಳಲ್ಲಿದ್ದಾರೆ. 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 18 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಸೋಂಕಿದ್ದರೂ ಬೇರೆ ಅನಾರೋಗ್ಯದ ಕಾರಣಕ್ಕೆ 12 ಜನರು ಅಸುನೀಗಿದ್ದಾರೆ.

ADVERTISEMENT

ಹೆಚ್ಚಿದ ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ: ಜಿಲ್ಲೆಯಲ್ಲಿ ಮತ್ತೆ ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಶನಿವಾರ 666 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 423 ಪರೀಕ್ಷೆಗಳನ್ನು ಆ್ಯಂಟಿಜೆನ್‌ ಕಿಟ್‌ ಮೂಲಕ ನಡೆಸಲಾಗಿದೆ. 238 ಪರೀಕ್ಷೆಗಳನ್ನು ಆರ್‌ಟಿಪಿಸಿಆರ್‌ ಪ್ರಯೋಗಾಲಯದಲ್ಲಿ ನಡೆಸಲಾಗಿದೆ. ಟ್ರು ನಾಟ್‌ ವಿಧಾನದಲ್ಲಿ ಐದು ಪರೀಕ್ಷೆಗಳನ್ನು ನಡೆಸಲಾಗಿದೆ.

ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ 49 ಮಂದಿಗೆ, ಆ್ಯಂಟಿಜೆನ್‌ ಪರೀಕ್ಷೆಯಲ್ಲಿ 15 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೃಢಪ‍ಟ್ಟ 64 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ 23, ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕಿನಲ್ಲಿ ತಲಾ 13, ಗುಂಡ್ಲುಪೇಟೆಯ 10 ಹಾಗೂ ಹನೂರು ತಾಲ್ಲೂಕಿನ ಪ್ರಕರಣಗಳು ಸೇರಿವೆ.

ಗುಣಮುಖರಾದ 27 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 14, ಗುಂಡ್ಲುಪೇಟೆಯ ಆರು ಮಂದಿ, ಯಳಂದೂರಿನ ಐವರು, ಕೊಳ್ಳೇಗಾಲದ ಇಬ್ಬರು ಇದ್ದಾರೆ. ಹೋಂ ಐಸೊಲೇಷನ್‌ನಲ್ಲಿದ್ದ ಇಬ್ಬರು ಶನಿವಾರ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.