ADVERTISEMENT

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ 7 ಟನ್ ಪ್ಲಾಸ್ಟಿಕ್ ಕಸ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 21:37 IST
Last Updated 13 ಮಾರ್ಚ್ 2022, 21:37 IST
ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಭಾನುವಾರ ಸ್ವಯಂ ಸೇವಕರು ಸಂಗ್ರಹಿಸಿರುವ ಪ್ಲಾಸ್ಟಿಕ್ ಕಸದ ರಾಶಿ
ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಭಾನುವಾರ ಸ್ವಯಂ ಸೇವಕರು ಸಂಗ್ರಹಿಸಿರುವ ಪ್ಲಾಸ್ಟಿಕ್ ಕಸದ ರಾಶಿ   

ಹನೂರು: ಮಲೆಮಹದೇಶ್ವರ ವನ್ಯಧಾಮ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರು ಭಾನುವಾರ ಮಲೆಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿ ಪ್ರಯಾಣಿಕರು ಬಿಸಾಡಿ ಹೋಗಿದ್ದ 7 ಟನ್ ಪ್ಲಾಸ್ಟಿಕ್ ಕಸ ಸಂಗ್ರಹಿಸಿದರು.

ಬೆಂಗಳೂರು, ಮೈಸೂರು, ಕನಕಪುರ ಮುಂತಾದ ಕಡೆಗಳಿಂದ 16 ಸ್ವಯಂ ಸೇವಾ ಸಂಸ್ಥೆಗಳಿಂದ 350 ಸ್ವಯಂ ಸೇವಕರು, ರಾಮಾಪುರ ವನ್ಯಜೀವಿ ವಲಯದ ಸಂತೇಕಾಣೆ ನರ್ಸರಿಯಿಂದ ಮಹದೇಶ್ವರ ಬೆಟ್ಟದವರೆಗೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ತೆರವುಗೊಳಿಸಿದರು.

ಇದಕ್ಕೂ ಮುನ್ನ ಸಂತೆಕಾಣೆ ನರ್ಸರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು, ‘ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಾನವನಿಗೆ, ವನ್ಯ ಪ್ರಾಣಿಗಳಿಗೆ, ಪಕ್ಷಿಗಳಿಗೆ ತುಂಬಾ ಅನಾನುಕೂಲವಾಗಲಿದೆ. ಹೀಗಾಗಿ, ಪ್ಲಾಸ್ಟಿಕ್ ಬದಲಿಗೆ ಪರ್ಯಾಯ ವಸ್ತುಗಳನ್ನು ಬಳಸಬೇಕು’ ಎಂದು ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.