ADVERTISEMENT

ಚಾಮರಾಜನಗರದಲ್ಲಿ ಗುಣಮುಖರು 73, ಸೋಂಕಿತರು 50

ಕೋವಿಡ್‌ ಪ್ರಕರಣಗಳ ಸಂಖ್ಯೆ 1,601ಕ್ಕೆ ಏರಿಕೆ, ಸೋಂಕು ಮುಕ್ತರಾದವರು 1,147 ಮಂದಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 14:23 IST
Last Updated 16 ಆಗಸ್ಟ್ 2020, 14:23 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಭಾನುವಾರ 50 ಮಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದ್ದರೆ, 73 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಸತತ ಎರಡನೇ ದಿನವೂ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಕೋವಿಡ್‌–19 ಪ್ರಕರಣಗಳ ಸಂಖ್ಯೆ 1601ಕ್ಕೆ ತಲುಪಿದೆ. 1,147 ಮಂದಿ ಗುಣಮುಖರಾಗಿದ್ದಾರೆ. 18 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ, ಕೋವಿಡ್‌ ದೃಢಪಟ್ಟಿದ್ದರೂ, ಬೇರೆ ಕಾರಣಗಳಿಂದ 12 ಮಂದಿ ಸಾವಿಗೀಡಾಗಿದ್ದಾರೆ. 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಪ್ರಸ್ತುತ ಜಿಲ್ಲೆಯಲ್ಲಿ 424 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 134 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 31,840 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 30,229 ಮಂದಿಯ ವರದಿ ನೆಗೆಟಿವ್‌ ಬಂದಿದೆ.

ಭಾನುವಾರ 452 ಮಂದಿಯ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಆರ್‌ಟಿಪಿಸಿಆರ್‌ ವಿಧಾನದಲ್ಲಿ 199, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 248, ಟ್ರು ನಾಟ್‌ ವಿಧಾನದಲ್ಲಿ ಐದು ಪರೀಕ್ಷೆಗಳನ್ನು ನಡೆಸಲಾಗಿದೆ. 49 ಮಂದಿಯಲ್ಲಿ ಸೋಂಕು ದೃಢಪಟ್ಟು, 403 ವರದಿಗಳು ನೆಗೆಟಿವ್‌ ಬಂದಿವೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

50 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 21, ಕೊಳ್ಳೇಗಾಲ ತಾಲ್ಲೂಕಿನ 14, ಗುಂಡ್ಲುಪೇಟೆಯ 12 ಮತ್ತು ಯಳಂದೂರು ತಾಲ್ಲೂಕಿನ ಮೂವರು ಇದ್ದಾರೆ.

ಗುಣಮುಖರಾದ 73 ಮಂದಿಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ 29 ಮಂದಿ, ಚಾಮರಾಜನಗರ ತಾಲ್ಲೂಕಿನ 20, ಗುಂಡ್ಲುಪೇಟೆಯ 15, ಯಳಂದೂರಿನ ಏಳು ಮತ್ತು ಹನೂರಿನ ಇಬ್ಬರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.