ADVERTISEMENT

ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ‌ ದಿನ ಶೇ 99.73 ಹಾಜರಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 10:18 IST
Last Updated 19 ಜುಲೈ 2021, 10:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಸರಾಗವಾಗಿ ನಡೆದಿದ್ದು, ಶೇ 99.73 ರಷ್ಟು ಮಕ್ಕಳು ಹಾಜರಾಗಿದ್ದಾರೆ.

ಕೋರ್ ವಿಷಯಗಳಾದ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಪರೀಕ್ಷೆಗಾಗಿ 11,963 ವಿದ್ಯಾರ್ಥಿಗಳು‌ ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,226 ಗಂಡು, 5,705 ಹೆಣ್ಣು‌ಮಕ್ಕಳು ಸೇರಿ 11,931 ಮಕ್ಕಳು ಪರೀಕ್ಷೆ ಬರೆದಿದ್ದಾರೆ.

'ಮೊದಲ ಪರೀಕ್ಷೆ ಗೊಂದಲವಿಲ್ಲದೇ ನಡೆದಿದೆ. 32 ಮಕ್ಕಳು‌ ಮಾತ್ರ ಗೈರಾಗಿದ್ದಾರೆ. ಮೂರು ವಿದ್ಯಾರ್ಥಿಗಳಿಗೆ ಸ್ವಲ್ಪ ಅನಾರೋಗ್ಯವಿತ್ತು. ಅವರಿಗೆ ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ‌ಬರೆಯಲು ಅವಕಾಶ ನೀಡಲಾಗಿತ್ತು' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.