ADVERTISEMENT

ಗುಂಡ್ಲುಪೇಟೆ | ವಾಹನ ಡಿಕ್ಕಿ; ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 14:47 IST
Last Updated 20 ನವೆಂಬರ್ 2023, 14:47 IST

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಬೇಗೂರಿನ ಸಂತೇಮಾಳ ಸಮೀಪ ವಾಹನ ಡಿಕ್ಕಿಯಾಗಿ ಪಾದಚಾರಿ ತೊಂಡವಾಡಿಯ ರವಿಚಂದ್ರ (35) ಮೃತಪಟ್ಟಿದ್ದಾರೆ.

ಈತ ಹೆದ್ದಾರಿ ರಸ್ತೆ ಬದಿ ಶನಿವಾರ ರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ವಾಹನ ಡಿಕ್ಕಿಯಾಗಿ ಫುಟ್‍ಪಾತ್ ಪಕ್ಕದಲ್ಲಿ ಬಿದ್ದಿದ್ದಾರೆ. ನಂತರ ಆತನ ಮೃತದೇಹ ಸೋಮವಾರ ಪತ್ತೆಯಾಗಿದೆ.

ಸುದ್ದಿ ತಿಳಿದ ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.