ಕೊಳ್ಳೇಗಾಲ: ರಸ್ತೆ ಅಪಘಾತದಲ್ಲಿ ಬಿದ್ದು ನರಳುತ್ತಿದ್ದ ಬೈಕ್ ಸವಾರರನ್ನು ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆ ತಂದು ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಾದ ಮಾಂಬಳ್ಳಿಯ ಉಲ್ಲಾಸ್ ಹಾಗೂ ಉತ್ತಂಬಳ್ಳಿಯ ಲಿಂಗರಾಜು ತೀವ್ರವಾಗಿ ಗಾಯಗೊಂಡಿದ್ದರು.
ಅದೇ ರಸ್ತೆ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ತರೆಳುತ್ತಿದ್ದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಇಬ್ಬರು ಗಾಯಾಳುಗಳನ್ನು ಕಂಡು, ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.