ಬಂಧನ (ಸಾಂದರ್ಭಿಕ ಚಿತ್ರ)
ಕೊಳ್ಳೇಗಾಲ: ತಾಲ್ಲೂಕಿನ ಮಲ್ಲಹಳ್ಳಿ ಮಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗ್ರಾಮದ ಪುರುಷೋತ್ತಮ್ (37) ಎಂಬಾತನನ್ನು ಅಗರ ಮಾಂಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯಿಂದ 90 ಎಂಎಲ್‌ನ 27 ಮದ್ಯದ ಪೌಚ್ ವಶಕ್ಕೆ ಪಡೆದಿದ್ದಾರೆ.
ಈತ ಮಲ್ಲಹಳ್ಳಿ ಮಾಳ ಗ್ರಾಮದ ಸೇತುವೆಯ ಮೇಲೆ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಕರಿಬಸಪ್ಪ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಂಧಿತನಿಗೆ ನೋಟಿಸ್ ಜಾರಿ ಮಾಡಿ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.