ADVERTISEMENT

18ಕ್ಕೆ ಇಳಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 1:09 IST
Last Updated 12 ಅಕ್ಟೋಬರ್ 2021, 1:09 IST
ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ನರ್ಸ್‌ ಒಬ್ಬರು ವ್ಯಕ್ತಿಯೊಬ್ಬರಿಗೆ ಲಸಿಕೆ ನೀಡಿದರು
ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ನರ್ಸ್‌ ಒಬ್ಬರು ವ್ಯಕ್ತಿಯೊಬ್ಬರಿಗೆ ಲಸಿಕೆ ನೀಡಿದರು   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 1,057 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ಹಾಗೂ ಹನೂರಿನ ತಲಾ ಒಬ್ಬರಿಗೆ ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿದೆ. ನಾಲ್ವರುಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 18ಕ್ಕೆ ಕುಸಿದಿದೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಹೋಂ ಐಸೊಲೇಷನ್‌ನಲ್ಲಿರುವವರ ಸಂಖ್ಯೆ 11ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಇದುವರೆಗೆ 32,523 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 31,967 ಮಂದಿ ಸೋಂಕುಮುಕ್ತರಾಗಿದ್ದಾರೆ.

ADVERTISEMENT

ಲಸಿಕಾ ಮೇಳ: ಜಿಲ್ಲೆಯಲ್ಲಿ ಭಾನುವಾರದಿಂದಲೇ ಕೋವಿಡ್‌ ಲಸಿಕಾ ಮೇಳ ಆರಂಭವಾಗಿದ್ದು, ಇದೇ 14ರವರೆಗೆ ಮುಂದುವರೆಯಲಿದೆ. ಭಾನುವಾರ 7398 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 373 ಮಂದಿ ಮೊದಲ ಡೋಸ್‌ ಪಡೆದಿದ್ದರೆ, 7,025 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ. ಸೋಮವಾರವೂ ಲಸಿಕಾ ಮೇಳ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.