ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದಲ್ಲಿ ಶನಿವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ 2025ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ವಿಜೇತರಾದ ಹೊನ್ನೂರು ಗೌರಮ್ಮ ಅವರನ್ನು ಗಣ್ಯರು ಸನ್ಮಾನಿಸಿದರು
ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನವನ್ನು ಅಂಬೇಡ್ಕರ್ ಯುವಕ ಸಂಘದಿಂದ ಆಚರಿಸಲಾಯಿತು.
ಗ್ರಾಮದ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಬುದ್ಧ, ಬಸವಣ್ಣನ ಫೋಟೊಗಳ ಜೊತೆಗೆ ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇಟ್ಟು, ವಿಜೃಂಭಣೆಯಿಂದ ಗ್ರಾಮಸ್ಥರು ಮೆರವಣಿಗೆ ಮಾಡಿದರು.
ಮೆರವಣಿಗೆ ಸಾಗುವ ದಾರಿಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿತ್ತು. ಅಭಿಮಾನಿಗಳು ಶ್ವೇತ ವಸ್ತ್ರ ಹಾಗೂ ನೀಲಿ ಶಲ್ಯ ಧರಿಸಿ ಗಮನ ಸೆಳೆದರು. ಯುವ ಜನರು ಜನಪದ ನೃತ್ಯ ಮಾಡಿದರು. ಭಾನುವಾರ ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಗ್ರಾಮದ ಯಜಮಾನರು, ಅಂಬೇಡ್ಕರ್ ಸಂಘದ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.