ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಗ್ರಾಮವನ್ನು ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ಅಂಬೇಡ್ಕರ್ ವೃತ್ತವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರವನ್ನು ಅಲಂಕೃತಗೊಂಡ ತೆರೆದ ವಾಹನದಲ್ಲಿ ಇರಿಸಿ ಪ್ರಮುಖ ಬೀದಿಗಳಲ್ಲಿ ಜೈಕಾರದ ಘೋಷಣೆಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ, ಬ್ಯಾಂಡ್, ನಗಾರಿ ಇತರೆ ಕಲಾತಂಡಗಳು ಮೆರವಣಿಗೆಗೆ ರಂಗು ತಂದವು. ಯುವಕರು ನೃತ್ಯಮಾಡಿ ಸಂಭ್ರಮಿಸಿದರು. ಮೂಲಸ್ಥಾನದಲ್ಲಿ ಮೆರವಣಿಗೆ ಕೊನೆಗೊಂಡಿತು.
ಗ್ರಾಮದ ಮುಖಂಡರು, ಮಹಿಳಾ ಸಂಘದ ಸದಸ್ಯರು, ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.