ADVERTISEMENT

ಪುತ್ತನಪುರದಲ್ಲಿ ಅಂಬೇಡ್ಕರ್ ಜಯಂತಿ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:06 IST
Last Updated 27 ಏಪ್ರಿಲ್ 2025, 16:06 IST
ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು
ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು   

ಗುಂಡ್ಲುಪೇಟೆ: ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಗ್ರಾಮದ ಅಂಬೇಡ್ಕರ್ ವೃತ್ತವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ಅಂಬೇಡ್ಕರ್ ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿ ಇರಿಸಿ ಪ್ರಮುಖ ಬೀದಿಗಳಲ್ಲಿ ಜೈಕಾರದ ಘೋಷಣೆಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ, ಬ್ಯಾಂಡ್, ನಗಾರಿ ಇತರೆ ಕಲಾತಂಡಗಳು ಮೆರವಣಿಗೆಗೆ ರಂಗುತಂದವು. ಯುವಕರು ನೃತ್ಯಮಾಡಿ ಸಂಭ್ರಮಿಸಿದರು. ಮೂಲಸ್ಥಾನದಲ್ಲಿ ಮೆರವಣಿಗೆ ಕೊನೆಗೊಂಡಿತು.

ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು, ಯುವಕರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.