ADVERTISEMENT

ಚಾಮರಾಜನಗರ | ಅಂಬೇಡ್ಕರ್ ಪರಿನಿರ್ವಾಣ ದಿನ: ಮೊಂಬತ್ತಿ ಬೆಳಗಿಸಿ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 6:20 IST
Last Updated 8 ಡಿಸೆಂಬರ್ 2025, 6:20 IST
ಚಾಮರಾಜನಗರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಶಾಖೆ ಮತ್ತು ಬುದ್ಧನಗರ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಗಣ್ಯರು ಮೊಂಬತ್ತಿ ಬೆಳಗಿದರು
ಚಾಮರಾಜನಗರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಶಾಖೆ ಮತ್ತು ಬುದ್ಧನಗರ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಗಣ್ಯರು ಮೊಂಬತ್ತಿ ಬೆಳಗಿದರು   

ಚಾಮರಾಜನಗರ: ಜಿಲ್ಲೆಯಾದ್ಯಂತ ದಲಿತ ಸಂಘಟನೆಗಳು, ಶಿಕ್ಷಣ ಸಂಸ್ಥೆ, ಸಂಘಟನೆಗಳ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚಾಮರಾಜನಗರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಶಾಖೆ ಮತ್ತು ಬುದ್ಧನಗರ ಹಿತರಕ್ಷಣಾ ಸಮಿತಿ ವತಿಯಿಂದ ಮೊಂಬತ್ತಿ ಮೆರವಣಿಗೆ ನಡೆಯಿತು. ಸಾರನಾಥ ಬೌದ್ಧ ವಿಹಾರದಲ್ಲಿ ಸಾಮೂಹಿಕ ಬುದ್ಧ ವಂದನೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು.

ಹೌಸಿಂಗ್ ಬೋರ್ಡ್, ನ್ಯಾಯಾಲಯ ರಸ್ತೆ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನದ ಪ್ರವೇಶಿಸಿ ಅಂಬೇಡ್ಕರ್ ಪುತ್ಥಳಿಗಯ ಮುಂದೆ ಸಾಮೂಹಿಕ ಬುದ್ಧ ವಂದನೆ ಸಲ್ಲಿಸಲಾಯಿತು.

ADVERTISEMENT

ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಶಾಖೆಯ ಅಧ್ಯಕ್ಷ ಆರ್.ಬಸವರಾಜು, ಉಪಾಧ್ಯಕ್ಷ ಮಲ್ಲಿಕ್ ಯಲಕ್ಕೂರು, ಉಮೇಶ್ ಕುದರ್, ತಾಲ್ಲೂಕು ಅಧ್ಯಕ್ಷ ಕೃಷ್ಣಯ್ಯ, ಬುದ್ಧನಗರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಹದೇವು, ಕಾರ್ಯದರ್ಶಿ ಶಂಕರಪ್ಪ, ವಕೀಲರಾದ ನಾಗಣ್ಣ, ಕರಿನಂಜನಪುರ ಯಜಮಾನ ಬಸವಣ್ಣ ಇದ್ದರು.

ಬಿವಿಎಸ್ ಮೊಂಬತ್ತಿ ಮೆರವಣಿಗೆ: ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕ‌ರ್ ಪರಿನಿರ್ವಾಣ ದಿನ ಆಚರಿಸಲಾಯಿತು. ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗ ಅಂಬೇಡ್ಕರ್ ಪ್ರತಿಮೆಗೆ ಪುಷ್ಷಾರ್ಚನೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ಮೆರವಣಿಗೆಗೆ ಚಾಲನೆ ನೀಡಿದರು.

ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿ ಬಳಿ ತೆರಳಿ ಬುದ್ದವಂದನೆ ಸಲ್ಲಿಸಲಾಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ಮಾತನಾಡಿ, ಅಂಬೇಡ್ಕರ್ ದೇಶದ ಸರ್ವರಿಗೂ ಸಂವಿಧಾನದ ಮೂಲಕ ಸಮಾನತೆಯ ಹಕ್ಕುಗಳು ನೀಡಿದ್ದಾರೆ. ಜೊತೆಗೆ ನಾಗರಿಕರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆಯೂ ಒತ್ತಿ  ಹೇಳಿದ್ದಾರೆ. ಅಂಬೇಡ್ಕರ್ ಹಾಗೂ ಸಂವಿಧಾನದ ಸ್ಮರಣೆ ಹಾಗೂ ಪಾಲನೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್ ರಾಜ್ ಮಾತನಾಡಿ ‘ಅಂಬೇಡ್ಕರ್ ಮಹಾ ಪರಿನಿರ್ವಾಣದ ದಿನ ಅವರ ಆದರ್ಶಗಳನ್ನು ಪಾಲಿಸುವುದ ಮೂಲಕ ಗೌರವ ಸಲ್ಲಿಸಬೇಕು ಎಂದರು.

ಮೆರವಣಿಗೆಯಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ನಮ್ಮನೆ ಪ್ರಶಾಂತ, ವಕೀಲರಾದ ಮಹೇಂದ್ರ, ಬುದ್ದ ಮಹೇಶ್ , ಕಾವ್ಯ, ನೇತ್ರಾ, ಸುಮಾಸ ಸೇರಿದಂತೆ ಹಲವರು ಭಾಗವಹಿಸಿದ್ದರು.

‘ಅಂಬೇಡ್ಕರ್ ಬರಹ, ಬದಕು ಸ್ಫೂರ್ತಿ’

ಅಂಬೇಡ್ಕರ್ ಜೀವನ ಚರಿತ್ರೆ, ಸಂಶೋಧನೆ, ಸಂವಿಧಾನ ರಚನೆ ಕುರಿತ ಬರಹಗಳು ಮತ್ತು ಸಾಮಾಜಿಕ ಚಿಂತನೆಗಳ ಕೃತಿಗಳು ಹೆಚ್ಚೆಚ್ಚು ಪ್ರಕಟವಾಗಬೇಕು ಎಂದು ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯಲ್ಲಿ ಸರ್ವೋದಯ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನ ಉದ್ಘಾಟಿಸಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವಿಶ್ವವಿದ್ಯಾನಿಲಯಗಳು ಅಂಬೇಡ್ಕರ್ ಅವರ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುತ್ತಿವೆಯಾದರೂ ಕೃತಿಗಳು ಎಲ್ಲರಿಗೂ  ದೊರೆಯುತ್ತಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.

ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ ಮಾತನಾಡಿದರು, ಮೆರವಣಿಗೆಯಲ್ಲಿ ಯಜಮಾನರಾದದ ಮಾಧು, ಮಂಜುನಾಥ್ ಕುದರ್, ನಾಗರಾಜ್, ನಂಜುಂಡಯ್ಯ, ಶಿವಣ್ಣ, ಗುರುಸ್ವಾಮಿ, ಮಹದೇವಯ್ಯ, ರವಿಚಂದ್ರ ಪ್ರಸಾದ್ ಕಹಳೆ, ಸರ್ವೋದಯ ಡಾ. ಬಿಆರ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಪ್ರಕಾಶ್, ಮಲ್ಲು, ಶ್ರೀಕಾಂತ್ ಮತ್ತು ಪದಾಧಿಕಾರಿಗಳು, ಬಡಾವಣೆ  ನಿವಾಸಿಗಳು ಇದ್ದರು.

ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.

ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಾಲೆಯ ಪ್ರಾಂಶುಪಾಲೆ ಕವಿತಾ, ನಿಲಯ ಪಾಲಕರಾದ ಮಂಜುನಾಥ್ ಹೆಚ್.ಎನ್, ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ, ವಿದ್ಯಾರ್ಥಿನಿಯರು ಅಂಬೇಡ್ಕರ್ ಅವರಿಗೆ ಗೌರವ ವಂದನೆ ಸಲ್ಲಿಸಿದರು.

ಡಾ.ಬಿ.ಆರ್.ಅಂಬೇಡ್ಕ‌ರ್ ಪರಿನಿರ್ವಾಣ ದಿನದ ಅಂಗವಾಗಿ ಶನಿವಾರ ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.