ADVERTISEMENT

ಅಂಬೇಡ್ಕರ್‌ ಅರಿಯಲು ಅಧ್ಯಯನ ಅಗತ್ಯ: ಪ್ರೊ. ಮಾದೇಶ್‌

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 15:51 IST
Last Updated 6 ಡಿಸೆಂಬರ್ 2022, 15:51 IST
ಚಾಮರಾಜನಗರದಲ್ಲಿ ಮಂಗಳವಾರ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಯಿತು
ಚಾಮರಾಜನಗರದಲ್ಲಿ ಮಂಗಳವಾರ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಯಿತು   

ಚಾಮರಾಜನಗರ: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ, ವಿಚಾರಧಾರೆ, ಚಿಂತನೆ ಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿದಾಗ ಮಾತ್ರ ಪ್ರತಿಯೊಬ್ಬರಿಗೂ ಅಂಬೇಡ್ಕರ್ ಏನು ಎಂಬುದು ಅರ್ಥವಾಗುತ್ತದೆ ಎಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ವಿವಿಯ ನಿರ್ದೇಶಕ ಪ್ರೊ.ಪಿ.ಮಾದೇಶ್ ಮಂಗಳವಾರ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಮತ್ತು ಗ್ರಂಥಾಲಯ ವಿಭಾಗದ ಸಹ ಯೋಗದಲ್ಲಿಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ವ್ಯಕ್ತಿಯಲ್ಲ; ಒಂದು ಶಕ್ತಿ. ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿದ ಅಂಬೇಡ್ಕರ್ ಅವರು ನಿರಂತರ ಓದಿನ ಪರಿಶ್ರಮದಿಂದ ವಿಶ್ವಜ್ಞಾನಿಯಾಗಿದ್ದಾರೆ. ವಿದ್ಯಾರ್ಥಿಗಳು ಅವರನ್ನು ಅರಿಯಬೇಕು. ಶಿಕ್ಷಣ ಪಡೆ
ಯುವ ಅವಧಿಯಲ್ಲಿ ಚಳವಳಿಗಳಲ್ಲಿ ಭಾಗವಹಿಸಲಿಲ್ಲ. ಭಾರತ
ಕ್ಕಿಂತಲೂ ಹೆಚ್ಚು ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಅವರನ್ನು ಅರಿತುಕೊಂಡ ವರಿದ್ದಾರೆ. ಹೊರ ದೇಶಗಳಲ್ಲಿ ಜ್ಞಾನಕ್ಕೆ ಹೆಚ್ಚು ಮಹತ್ವ ನೀಡಿದರೆ ಭಾರತದಲ್ಲಿ ಜಾತಿಗೆ ಆದ್ಯತೆ ನೀಡಲಾಗುತ್ತದೆ. ಇದು ಸರಿಯಲ್ಲ’ ಎಂದರು.

ADVERTISEMENT

ಬನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ನೀಲಕಂಠಸ್ವಾಮಿ ಮಾತನಾಡಿ, ‘ಅಂಬೇಡ್ಕರ್ ಅವರು ಸಾಮಾಜಿಕ ಅಭಿವೃದ್ಧಿ, ಪರಿವರ್ತನೆಗಾಗಿ ಏನೇನು ಕೊಡುಗೆ ನೀಡಿದ್ದಾರೆ ಎಂಬುದನ್ನು ಅರಿಯಲು ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಅವರ ಜೀವನ, ಸಾಧನೆ, ಸಿದ್ದಾಂತಗಳನ್ನು ಓದುವುದನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು ಅಧ್ಯಕ್ಷತೆ ಹಿಸಿದ್ದರು.

ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಕುರಿತ ಪ್ರಬಂಧ, ರಸಪ್ರಶ್ನೆ, ಆಶುಭಾಷಣ, ಹಾಗೂ ಕವನ ವಾಚನ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ.ಎಂ. ನಾಗೇಂದ್ರಕುಮಾರ್, ಗ್ರಂಥಪಾಲಕರಾದ ಡಾ.ಜಯ ಕುಮಾರ್, ಉಪನ್ಯಾಸಕಿ ಚಂದ್ರಮ್ಮ, ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಚಾಮರಾಜು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ನಂಜುಂಡಸ್ವಾಮಿ, ಇದ್ದರು.

‘ಪುಸ್ತಕ ಪ್ರೇಮಿ’

‘ಜೀವನದ ಅಂತ್ಯದವರೆಗೂ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಸಾಮಾಜಿಕ, ಅರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದರು. ಶೋಷಿತ ಸಮುದಾಯಕ್ಕೆ ಸ್ವಾಭಿಮಾನದ ಪಾಠ ಹೇಳಿಕೊಟ್ಟರು. ಅವರ ರಾಜಕೀಯ, ಅರ್ಥಿಕ ನೀತಿ ಜಗತ್ತಿನ ಗಮನ ಸೆಳೆದಿದೆ’ ಎಂದು ಪ್ರೊ. ಪಿ.ಮಾದೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.