
ಪ್ರಜಾವಾಣಿ ವಾರ್ತೆಡಾ. ಅಂಬೇಡ್ಕರ್
ಚಾಮರಾಜನಗರ: ತಾಲ್ಲೂಕಿನ ಜ್ಯೋತಿ ಗೌಡನಪುರದ ಹಳೆ ಹಾಗೂ ಹೊಸ ಬಡಾವಣೆಯಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು, ಬೋರ್ಡ್ ವಿರೂಪಗೊಳಿಸಿ, ಬೌದ್ಧ ವಿಹಾರದೊಳಗಿದ್ದ ಬುದ್ಧ ಹಾಗೂ ಅಂಬೇಡ್ಕರ್ ವಿಗ್ರಹಗಳನ್ನು ಒಡೆದು ಹಾಕಿದ್ದಾರೆ.
ಸುದ್ದಿ ಹರಡಿದಂತೆ ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಯಿತು. ಸುತ್ತಲಿನ ಗ್ರಾಮಗಳಿಂದ ಅಂಬೇಡ್ಕರ್ ಅನುಯಾಯಿಗಳು ಸ್ಥಳದಲ್ಲಿ ಸೇರಿ ಪ್ರತಿಭಟಿಸಿದರು
ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.
‘ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸಬೇಕು’ ಎಂದು ಒತ್ತಾಯಿಸಿ ಗ್ರಾಮದ ಮುಖಂಡರು, ಮಹಿಳೆಯರು ಬೆಳಿಗ್ಗೆಯಿಂದ ಸಂಜೆಯವರೆಗೂ ಪ್ರತಿಭಟನೆ ನಡೆಸಿದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.