
ಪ್ರಜಾವಾಣಿ ವಾರ್ತೆ
ಗುಂಡ್ಲುಪೇಟೆ: ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಅಣ್ಣೂರುಕೇರಿ ಗ್ರಾಮದಲ್ಲಿ ಉಪ್ಪಾರ ಸಮುದಾಯದ ವತಿಯಿಂದ ಶ್ರೀ ಭಗೀರಥ ಮಹರ್ಷಿಯ ಭಾವಚಿತ್ರವನ್ನು ತೆರೆದ ವಾಹನದಲ್ಲಿರಿಸಿ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ ಹಾಗೂ ಡಿ.ಜೆ ಹಾಡುಗಳಿಗೆ ಯುವಕರು, ವಯಸ್ಕರು ಹಾಗೂ ಮಹಿಳೆಯರು ನೃತ್ಯ ಮಾಡಿ ಸಂಭ್ರಮಿಸಿದರು. ಮೆರವಣಿಗೆ ಮನೆಗಳ ಮುಂದೆ ಸಾಗಿದ ಸಂದರ್ಭ ಮಹಿಳೆಯರು ಪೂಜೆ ಮಾಡಿದರು. ಯಜಮಾನರ ವತಿಯಿಂದ ಅನ್ನದಾನವು ಸಹ ನಡೆಯಿತು.
ಭಗೀರಥ ಸಂಘದ ಯುವಕರಾದ ಗೋಪಿ, ರವಿ, ಗೋಮಿ, ಮಲ್ಲೇಶ್, ಶಿವು, ಮಣಿ, ಆನಂದ್ ಸೇರಿದಂತೆ ಯಜಮಾನರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.