ಸಂತೇಮರಹಳ್ಳಿ: ಮೈಸೂರಿನಲ್ಲಿ ಮೊದಲನೆ ಬಾರಿಗೆ ಅ.14 ಹಾಗೂ 15ರಂದು ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುವ ರಾಷ್ಟ್ರಮಟ್ಟದ ಬೌದ್ಧ ಮಹಾ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆ ವ್ಯಾಪ್ತಿಯಿಂದ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ ಬೌದ್ಧ ಮಹಾ ಸಮ್ಮೇಳನ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಅ.14ರಂದು ಬೌದ್ಧ ಬಿಕ್ಕುಗಳ ಸಮಾವೇಶ ಹಾಗೂ 15 ರಂದು ನಡೆಯುವ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಪ್ರಿಯಾಂಕ್ ಖರ್ಗೆ, ಸಂಸದರಾದ ಸುನೀಲ್‌ಬೋಸ್, ಸಂಸದ ಯದುವೀರ್ ಒಡೆಯರ್, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸುವರು ಎಂದರು.
ಸಮಾವೇಶಕ್ಕೆ ರಾಜ್ಯದ ಜಿಲ್ಲೆಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು. ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಬೌದ್ಧ ಅನುಯಾಯಿಗಳು ಭಾಗವಹಿಸುವ ನಿರೀಕ್ಷೆ ಇದೆ .
ಸಮ್ಮೇಳನ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಉರಿಲಿಂಗಿಪೆದ್ದಿ ಮಹಾ ಸಂಸ್ಥಾನ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಸಮ್ಮೇಳನ ಸಂಬಂಧವಾಗಿ ಪ್ರಚಾರ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಬೌದ್ಧ ಅನುಯಾಯಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮೂಲ್ ನಾಮನಿರ್ದೇಶಕ ಕಮರವಾಡಿ ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯರಿಯೂರು ಯೋಗೀಶ್, ಸಂತೇಮರಹಳ್ಳಿ ಪಶಿ, ಗಣಗನೂರು ನಾಗಯ್ಯ, ಹೊನ್ನೂರು ರಾಘವೇಂದ್ರ, ಕಂದಹಳ್ಳಿ ನಂಜುಂಡಸ್ವಾಮಿ, ಟಿ.ಹೊಸೂರು ಚಂದ್ರು, ಹೊನ್ನೂರು ರೂಪೇಶ್, ಆಲ್ಕೆರೆ ಅಗ್ರಹಾರ ರೇವಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.